ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ಘೋಷಿಸಿದ್ದ ಅಕ್ಕ ಕೆಫೆ ಯೋಜನೆಯನ್ನು ಕರ್ನಾಟಕ ಕೌಶಲ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯು ಎನ್ಎಲ್ಎಂ ಜೊತೆಗೂಡಿ ಅನುಷ್ಠಾನಕ್ಕೆ ತಂದಿದೆ. ‘ಅಕ್ಕ ಕೆಫೆ’ಗಳು ದುಡಿಯುವ ಮಹಿಳೆಯರ ಕೈಗಳಿಗೆ ಕೆಲಸ ನೀಡುವುದರ ಜೊತೆಯಲ್ಲೇ ಕಡಿಮೆ ದರದಲ್ಲಿ ಶುಚಿ, ರುಚಿಯಾದ ಊಟ ಉಪಾಹಾರ ಒದಗಿಸುತ್ತಿವೆ.
ಬೆಂಗಳೂರಿನಂತಹ ಮಹಾನಗರಗಳಲ್ಲೂ ಸ್ತ್ರೀ ಶಕ್ತಿ ಗುಂಪುಗಳ ಮೂಲಕ ಮಹಿಳೆಯರಿಗೆ ಉದ್ಯೋಗದ ಅವಕಾಶಗಳನ್ನು ಸೃಜಿಸುವ ಕನಸನ್ನು ಈ ಯೋಜನೆ ಸಾಕಾರಗೊಳಿಸಿದೆ.
ಅಕ್ಕ ಕೆಫೆಯಿಂದಲೇ ಸರ್ಕಾರಿ ಕಚೇರಿಗಳಿಗೆ ಆಹಾರ ಪೂರೈಕೆಯಾಗುತ್ತಿದೆ.ವಿಧಾನಸೌಧ, ವಿಕಾಸಸೌಧ, ಎಂ.ಎಸ್. ಬಿಲ್ಡಿಂಗ್ಸೇರಿದಂತೆ ಸರ್ಕಾರಿ ಕಚೇರಿಗಳಲ್ಲಿ ‘ಅಕ್ಕಕೆಫೆ’ಯ ತಿಂಡಿ ಹಾಗೂ ಊಟಕ್ಕೆ ಭಾರಿ ಬೇಡಿಕೆ ಬಂದಿದೆ.