HomeKarnatakaನಟ ದರ್ಶನ್ ಗೆ ಜಾಮೀನು ಮಂಜೂರು ವಿಚಾರ: ಮಾಡಿದ ತಪ್ಪಿಗೆ ಶಿಕ್ಷೆಯಾಗಬೇಕು, ಹೋರಾಟ ಮುಂದುವರೆಸುತ್ತೇವೆ ಎಂದ...

ನಟ ದರ್ಶನ್ ಗೆ ಜಾಮೀನು ಮಂಜೂರು ವಿಚಾರ: ಮಾಡಿದ ತಪ್ಪಿಗೆ ಶಿಕ್ಷೆಯಾಗಬೇಕು, ಹೋರಾಟ ಮುಂದುವರೆಸುತ್ತೇವೆ ಎಂದ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ

 ದಾವಣಗೆರೆ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್ ಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ದರ್ಶನ್ ಗೆ ಜಾಮೀನು ಸಿಕ್ಕಿರುವುದಕ್ಕೆ ಮೃತ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಾಶಿನಾಥಯ್ಯ, ದರ್ಶನ್ ಗೆ ಜಾಮೀನು ಸಿಕ್ಕಿದ್ದು ಕಾನೂನು ಕ್ರಮ. ಅದಕ್ಕೆ ನಮ್ಮ ಅಭ್ಯಂತರವೇನೂ ಇಲ್ಲ. ಆದರೆ ನಮಗೆ ಅನ್ಯಾಯವಾಗಿದೆ. ನ್ಯಾಯಕ್ಕಾಗಿ ನಾವು ಹೋರಾಟ ಮುಂದುವರೆಸುತ್ತೇವೆ ಎಂದು ತಿಳಿಸಿದ್ದಾರೆ.

ದರ್ಶನ್ ಮಾಡಿದ ತಪ್ಪಿಗೆ ಶಿಕ್ಷೆಯಾಗಬೇಕು ಎಂಬುದು ನಮ್ಮ ಬೇಡಿಕೆ. ಈ ನಿಟ್ಟಿನಲ್ಲಿ ನಾವು ಕಾನೂನು ಹೋರಾಟ ಮಾಡುತ್ತೇವೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular