ಬಳ್ಳಾರಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಸೇರಿದ್ದ ನಟ ದರ್ಶನ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿರುವ ಹಿನ್ನೆಲೆಯಲ್ಲಿ ನಟ ದರ್ಶನ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಸಂಜೆ 6 ಗಂಟೆಗೆ ನಟ ದರ್ಶನ್ ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಿದ್ದು, ಬಿಡುಗಡೆ ಬಳಿಕ ನಟ ದರ್ಶನ್ ಬಳ್ಳಾರಿಯಿಂದ ರಸ್ತೆ ಮಾರ್ಗವಾಗಿ ಬೆಂಗಳೂರಿಗೆ ಹೊರಟಿದ್ದಾರೆ.
ಪತ್ನಿ ವಿಜಯಲಕ್ಷ್ಮೀ ತಂದಿರುವ ಕಾರಿನಲ್ಲಿಯೇ ದರ್ಶನ್ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಬಳ್ಳಾರಿಯಿಂದ ಅನಂತಪುರ ಮಾರ್ಗವಾಗಿ ಬೆಂಗಳೂರಿಗೆ ಬರಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ 50 ಪೊಲೀಸರು ದರ್ಶನ್ ವಾಹನಕ್ಕೆ ಭದ್ರತೆ ಕಲ್ಪಿಸಿದ್ದು, ಬಳ್ಳಾರಿ ಗಡಿವರೆಗೂ ದರ್ಶನ್ ವಾಹನದ ಜೊತೆಯಲ್ಲಿ ಸಾಗಲಿದ್ದಾರೆ.
ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಜೊತೆಯಲ್ಲಿ ಬಳ್ಳಾರಿಯಿಂದ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ.