ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ರೋಗಿಗಳಿಗೆ ಉಚಿತ ಡಯಾಲಿಸಿಸ್ ಸೇವೆ ನೀಡುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆಯಬಹುದಾಗಿದೆ.
ಪ್ರಧಾನ ಮಂತ್ರಿ ರಾಷ್ಟ್ರೀಯ ಡಯಾಲಿಸಿಸ್ ಕಾರ್ಯಕ್ರಮದಡಿಯಲ್ಲಿ ನೆಪ್ರೋಪ್ಲಸ್ ಸಂಸ್ಥೆಯ ಸಹಯೋಗದೊಂದಿಗೆ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆ ಹಾಗೂ ಚಳ್ಳಕೆರೆ, ಹಿರಿಯೂರು, ಮೊಳಕಾಲ್ಮೂರು, ಹೊಳಲ್ಕೆರೆ ಹಾಗೂ ಹೊಸದುರ್ಗ ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ರೋಗಿಗಳಿಗೆ ಉಚಿತ ಡಯಾಲಿಸಿಸ್ ಸೇವೆ ನೀಡುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕೆ.ಶಿವಕುಮಾರ್ ಅವರ ಮೊಬೈಲ್ ಸಂಖ್ಯೆ 7760924885, ಎಂ.ಹೆಚ್.ಮಂಜುನಾಥ್ ಮೊಬೈಲ್ ಸಂಖ್ಯೆ 9738485783ಗೆ ಸಂಪರ್ಕಿಸಬಹುದು ಎಂದು ಚಿತ್ರದುರ್ಗ ಜಿಲ್ಲಾ ಸರ್ವೇಕ್ಷಣಾ ಘಟಕದ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ತಿಳಿಸಿದ್ದಾರೆ.