HomeKarnatakaಮತ್ತೆ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ: ‘ಯೆಲ್ಲೋ ಅಲರ್ಟ್’ ಘೋಷಣೆ

ಮತ್ತೆ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ: ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು: ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ ಮಲೆನಾಡಿನ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಗುರುವಾರ ಯೆಲ್ಲೋ ಅಲರ್ಟ್ ನೀಡಿದೆ.

ರಾಜ್ಯದ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದ ಹವಾಮಾನ ಇಲಾಖೆ ಈ ಜಿಲ್ಲೆಗಳ ಕೆಲವು ಕಡೆ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಯ ಅನೇಕ ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆ ಆಗುವ ಸಂಭವ ಇದೆ.

ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ. ರಾಮನಗರ, ಚಾಮರಾಜನಗರ, ಮಂಡ್ಯ ಜಿಲ್ಲೆಗಳಿಗೆ ಶುಕ್ರವಾರ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳ ಕೆಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು ನವೆಂಬರ್ 3ರವರೆಗೆ ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಂಭವವಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular