alex Certify ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ವಿವಿಧ ಯೋಜನೆಗಳಡಿ ಸಹಾಯಧನ ಸಹಿತ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ವಿವಿಧ ಯೋಜನೆಗಳಡಿ ಸಹಾಯಧನ ಸಹಿತ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ 2024-25ನೇ ಸಾಲಿನ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯಗಳಿಗಾಗಿ ಪರಿಶಿಷ್ಟ ಪಂಗಡದ ಸಮುದಾಯ ಜನಾಂಗದ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಬೆಂಗಳೂರು ಓನ್, ಕರ್ನಾಟಕ ಓನ್, ಗ್ರಾಮ ಓನ್ ಸೆಂಟರ್‌ಗಳ ಮೂಲಕ (https://sevasindhuservices.karnataka.gov.in) ಗೆ ಭೇಟಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ನ.23 ಕೊನೆಯ ದಿನವಾಗಿದೆ.

ಯೋಜನೆಗಳು:

ನೇರಸಾಲ ಯೋಜನೆ:

ಕಿರು ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಘಟಕವೆಚ್ಚ ರೂ.1 ಲಕ್ಷ ಇದರಲ್ಲಿ.50,000 ರೂ ಸಹಾಯಧನ ಮತ್ತು 50,000 ಸಾಲ)

ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ:

ವ್ಯಾಪಾರ ಮತ್ತು ಇತರೆ ಸಣ್ಣ ಉದ್ಯಮಗಳಿಗಾಗಿ ಘಟಕ ವೆಚ್ಚದ ಶೇ.70 ರಷ್ಟು ಅಥವಾ ಗರಿಷ್ಟ 2 ಲಕ್ಷ ರೂ. ಸಹಾಯಧನ ಮತ್ತು ಉಳಿದ ಬ್ಯಾಂಕ್ ಸಾಲ.

ಸ್ವಾವಲಂಭಿ ಸಾರಥಿ:

ಸರಕು ವಾಹನ/ಟ್ಯಾಕ್ಸಿ ಉದ್ದೇಶಕ್ಕಾಗಿ ಘಟಕ ವೆಚ್ಚದ ಶೇ.75 ರಷ್ಟು ಅಥವಾ ಗರಿಷ್ಟ 4 ಲಕ್ಷ ರೂ. ಸಹಾಯಧನ ಮತ್ತು ಉಳಿದ ಬ್ಯಾಂಕ್ ಸಾಲ/ಫಲಾನುಭವಿಯ ವಂತಿಕೆ.

ಮೈಕ್ರೋಕ್ರೆಡಿಟ್ (ಪ್ರೇರಣಾ) ಯೋಜನೆ:

ಮಹಿಳಾ ಸ್ವಸಹಾಯ ಸಂಘದ ಕನಿಷ್ಠ 10 ಜನ ಸದಸ್ಯರಿಗೆ ಸ್ವಯಂ ಉದ್ಯೋಗ ಕಲ್ಪಿಸಲು ಕಿರು ಆರ್ಥಿಕ ಚಟುವಟಿಕೆಗಳಿಗೆ ಘಟಕ ವೆಚ್ಚ 2.50 ಲಕ್ಷ ರೂ, ಇದರಲ್ಲಿ 1.50 ಲಕ್ಷ ರೂ. ಸಹಾಯಧನ ಮತ್ತು 1 ಲಕ್ಷ ರೂ. ನಿಗಮದಿಂದ ಸಾಲ ಕಲ್ಪಿಸಲಾಗುವುದು.

ಗಂಗಾ ಕಲ್ಯಾಣ ಯೋಜನೆ:

ಸಣ್ಣ ಮತ್ತು ಅತಿ ಸಣ್ಣ ರೈತರು ಹೊಂದಿರುವ ಖುಷ್ಕಿ, ಒಣ ಜಮೀನಿನಲ್ಲಿ ಕೊಳವೆಬಾವಿ ಕೊರೆಸಿ, ನೀರಾವರಿ ಸೌಲಭ್ಯ ಕಲ್ಪಿಸಲಾಗುವುದು. ಈ ಯೋಜನೆಗೆ ಘಟಕವೆಚ್ಚ 3.75 ಲಕ್ಷ ರೂ.(50,000 ರೂ ಸಾಲ ಒಳಗೊಂಡಂತೆ).

ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ನಗರದ ಕಂಟೋನ್‌ಮೆಂಟ್‌ನ ನಂದಿ ಶಾಲೆ ಹಿಂಭಾಗದ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...