HomeKarnatakaಎಚ್ಚರ..! 18 ವರ್ಷದೊಳಗಿನ ಮಕ್ಕಳನ್ನು ಪಟಾಕಿ ಮಳಿಗೆಗಳಲ್ಲಿ ಕೆಲಸಕ್ಕೆ ನೇಮಿಸಿಕೊಂಡರೆ ಕಾನೂನು ಕ್ರಮ ಫಿಕ್ಸ್.!

ಎಚ್ಚರ..! 18 ವರ್ಷದೊಳಗಿನ ಮಕ್ಕಳನ್ನು ಪಟಾಕಿ ಮಳಿಗೆಗಳಲ್ಲಿ ಕೆಲಸಕ್ಕೆ ನೇಮಿಸಿಕೊಂಡರೆ ಕಾನೂನು ಕ್ರಮ ಫಿಕ್ಸ್.!

ದೀಪಾವಳಿ ಹಬ್ಬದ ಪ್ರಯುಕ್ತ ಸ್ಥಾಪಿಸಲಾಗುತ್ತಿರುವ ಪಟಾಕಿ ಮಾರಾಟ ಮಳಿಗೆಗಳಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಳ್ಳದಂತೆ ಕಾರ್ಮಿಕ ಇಲಾಖೆ ಸೂಚನೆ ನೀಡಿದೆ.

ಈ ಕಾಯ್ದೆಯನ್ವಯ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ(ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016ರನ್ವಯ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದು ಹಾಗೂ 18 ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಉದ್ದಿಮೆಯಲ್ಲಿ ಕೆಲಸಕ್ಕೆ ನಿಯೋಜಿಸಿಕೊಳ್ಳುವುದು ಸಂಪೂರ್ಣವಾಗಿ ನಿಷೇಧಿಸಲ್ಪಟ್ಟಿರುತ್ತದೆ. ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿದಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆಯನ್ವಯ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular