ಮುಂಬೈ: ನವಿ ಮುಂಬೈನ ಉಲ್ವೆಯಲ್ಲಿ ನಡೆದ ದುರಂತ ಘಟನೆಯಲ್ಲಿ ಸಿಲಿಂಡರ್ ಸ್ಪೋಟಿಸಿ ಮೂವರು ಸಾವನ್ನಪ್ಪಿದ್ದಾರೆ.
ಜನರಲ್ ಸ್ಟೋರ್‌ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡ ನಂತರ ಕನಿಷ್ಠ ಮೂರು ಜನರು ಸಾವನ್ನಪ್ಪಿದ್ದು, ಒಬ್ಬರು ಗಾಯಗೊಂಡಿದ್ದಾರೆ. ನಂತರ ನವಿ ಮುಂಬೈನ ಉಲ್ವೆ ನಗರ ಪ್ರದೇಶದಲ್ಲಿನ ಅಂಗಡಿಯ ಮಾಲೀಕರ ನಿವಾಸಕ್ಕೂ ಬೆಂಕಿ ತಗುಲಿತು. ಬಿಡುಗಡೆಯಾದ ಮಾಹಿತಿಯ ಪ್ರಕಾರ, ಬುಧವಾರ ಸಂಜೆ ಅಂಗಡಿಯಲ್ಲಿ ಇರಿಸಲಾಗಿದ್ದ ಮೂರು ಗ್ಯಾಸ್ ಸಿಲಿಂಡರ್ ಗಳು ಸ್ಫೋಟಗೊಂಡು ಅವಘಢ ಸಂಭವಿಸಿದೆ.
ಇದರಲ್ಲಿ ಅಂಗಡಿಯವನ ಹೆಂಡತಿ ಮತ್ತು ಇಬ್ಬರು ಮಕ್ಕಳು ಸೇರಿದಂತೆ ಕುಟುಂಬದ ಮೂವರು ಸದಸ್ಯರು ಸಾವನ್ನಪ್ಪಿದ್ದಾರೆ. ಮಾಲೀಕನಿಗೆ ಗಾಯಗಳಾಗಿವೆ.
ಅಂಗಡಿ ಮಾಲೀಕನನ್ನ ರಮೇಶ್ ಎಂದು ಗುರುತಿಸಲಾಗಿದ್ದು, ಅವನ ಹೆಂಡತಿ ಮತ್ತು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ ಮತ್ತು ಗಾಯಗೊಂಡಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ.
ಅಂಗಡಿಯಲ್ಲಿ ಮೂರು ಗ್ಯಾಸ್ ಸಿಲಿಂಡರ್‌ಗಳು ಸ್ಫೋಟಗೊಂಡು ಅಂಗಡಿ ಮತ್ತು ವಾಸಕ್ಕೆ ಬೆಂಕಿ ತಗುಲಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು, 5 ಕೆಜಿಯ ಎರಡು ಸಣ್ಣ ಸಿಲಿಂಡರ್ ಮತ್ತು 12 ಕೆಜಿ ಸಿಲಿಂಡರ್ ಸ್ಫೋಟಗೊಂಡಿದೆ. ರಮೇಶ್ ಗಾಯಗೊಂಡಿದ್ದು, ಪ್ರಸ್ತುತ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಗ್ನಿ ಶಾಮಕ ವಾಹನಗಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ ಎಂದು ನವಿ ಮುಂಬೈನ ಹೆಚ್ಚುವರಿ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.