ಕಲಬುರಗಿ : ಕಲಷಿತ ನೀರು ಸೇವಿಸಿ ಮಗು ಮೃತಪಟ್ಟು, ಹಲವರು ಅಸ್ವಸ್ಥಗೊಂಡ ಘಟನೆ ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಹೂಡಾ ಬಿ ಗ್ರಾಮದಲ್ಲಿ ನಡೆದಿದೆ.
ಗ್ರಾಮಕ್ಕೆ ಸರಬರಾಜು ಮಾಡುವ ನೀರು ಕಲುಷಿತಗೊಂಡು ಹಲವರು ವಾಂತಿ ಭೇದಿಯಿಂದ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚಿಕಿತ್ಸೆ ಫಲಿಸದೇ 5 ವರ್ಷದ ಮಗುವೊಂದು ಮೃತಪಟ್ಟಿದೆ.
ಘಟನೆ ಹಿನ್ನೆಲೆ ಗ್ರಾಮದ ಜನರು ಸ್ಥಳೀಯ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ದೀಪಾವಳಿ ಹಬ್ಬದ ಸಂಭ್ರಮದಲ್ಲಿದ್ದ ಜನ ವಾಂತಿ ಭೇದಿಯಿಂದ ಬಳಲುತ್ತಿದ್ದಾರೆ. ಕಲುಷಿತ ನೀರು ಸೇವನೆಯಿಂದ ಈ ಘಟನೆ ನಡೆದಿದೆ. ನೀರು ಸರಬರಾಜು ಮಾಡಿದ ಸಿಬ್ಬಂದಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಲಾಗಿದೆ.