HomeKarnatakaBREAKING : ಬೆಂಗಳೂರಿನಲ್ಲೇ ನಟ ದರ್ಶನ್' ಗೆ ಚಿಕಿತ್ಸೆ, ಇಂದು ಮಧ್ಯಾಹ್ನ 2 ಗಂಟೆಗೆ ಖಾಸಗಿ...

BREAKING : ಬೆಂಗಳೂರಿನಲ್ಲೇ ನಟ ದರ್ಶನ್’ ಗೆ ಚಿಕಿತ್ಸೆ, ಇಂದು ಮಧ್ಯಾಹ್ನ 2 ಗಂಟೆಗೆ ಖಾಸಗಿ ಆಸ್ಪತ್ರೆಗೆ ದಾಖಲು.!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟ ದರ್ಶನ್ ಗೆ ಮಧ್ಯಂತರ ಜಾಮೀನು ಮಂಜೂರಾಗಿದ್ದು, ಜೈಲಿನಿಂದ ರಿಲೀಸ್ ಆಗಿದ್ದಾರೆ.

ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್ ಇಂದು ಮಧ್ಯಾಹ್ನ 2 ಗಂಟೆಗೆ ಆಸ್ಪತ್ರೆಗೆ ದಾಖಲಾಗಲಿದ್ದಾರೆ ಎಂದು ತಿಳಿದು ಬಂದಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯಲಿದ್ದಾರೆ.ಆದರೆ ಯಾವ ಆಸ್ಪತ್ರೆಗೆ ದಾಖಲಾಗಲಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಚಿಕಿತ್ಸೆ ಪಡೆದ 6 ವಾರಗಳ ಬಳಿಕ ಅವರು ಮತ್ತೆ ಸರೆಂಡರ್ ಆಗಬೇಕಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಅವರ ಜಾಮೀನು ಅರ್ಜಿಯ ಕುರಿತಾದ ತೀರ್ಪನ್ನು ಹೈಕೋರ್ಟ್ ಬುಧವಾರ ಇಂದು ಪ್ರಕಟಿಸಿದೆ. ಹೌದು. ನಟ ದರ್ಶನ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಹೈಕೋರ್ಟ್ 6 ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.ಬಳ್ಳಾರಿ ಜೈಲಿನಲ್ಲಿರುವ ಕೊಲೆ ಆರೋಪಿ ದರ್ಶನ್ ಬೆನ್ನುನೋವಿನಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಜಾಮೀನು ನೀಡುವಂತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ವೇಳೆ ನಟ ದರ್ಶನ್ ಪರ ವಕೀಲ ಸಿ.ವಿ.ನಾಗೇಶ್, ದರ್ಶನ್ ಗೆ ಡಿಸ್ಕ್ ಸಮಸ್ಯೆಯಿದೆ. ತಕ್ಷಣ ಸರ್ಜರಿ ಅಗತ್ಯವಿದೆ. ಸರ್ಜರಿ ಮಾಡಿಸದಿದ್ದಲ್ಲಿ ದರ್ಶನ್ ಕಾಲಿಗೆ ಪಾರ್ಶ್ವವಾಯು ಆಗುವ ಸಾಧ್ಯತೆ ಇದೆ. ಹಾಗಾಗಿ ಜಾಮೀನು ಮಂಜೂರು ಮಾಡುವಂತೆ ಮನವಿ ಮಾಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular