ಬೆಂಗಳೂರು: ಹಾಸನದ ಅದಿದೇವತೆ ಹಾಸನಾಂಬೆ ದರ್ಶನಕ್ಕೆಂದು ಬಿಡಲಾಗಿದ್ದ 500 ಕೆ.ಎಸ್.ಆರ್.ಟಿ.ಸಿ ಬಸ್ ರದ್ದುಗೊಳಿಸಲಾಗಿದೆ.
ಹಾಸನಾಂಬೆ ದರ್ಶನಕ್ಕೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆಗಳಿಂದ ವಿಶೇಷ ಕೆ.ಎಸ್.ಆರ್.ಟಿ.ಸಿ ಬಸ್ ಬಿಡಲಾಗಿತ್ತು. ನಿರೀಕ್ಷೆಗೂ ಮೀರಿ ಜನರು ಹಾಸನಾಂಬೆ ದರ್ಶನಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಜನರನ್ನು ನಿಯಂತ್ರಿಸಲು ಪೊಲೀಸರು ಹಸಾಹಸಪಡುತ್ತಿದ್ದಾರೆ. ಇದರಿಂದ ವಿಶೇಷ ಬಸ್ ರದ್ದು ಮಾಡಲಾಗಿದೆ.
ಹಾಸನಾಂಬೆ ದೇವಿ ದರ್ಶನಕ್ಕೆ ಇಂದು 7ನೇ ದಿನ ಹಾಗೂ ದೀಪಾವಳಿ ಹಿನ್ನೆಲೆಯಲ್ಲಿ ಹಾಸನಾಂಬೆ ದರ್ಶನಕ್ಕೆ ಜನಸಾಗರವೇ ಹರಿದುಬಂದಿದೆ. ಮಳೆಯ ನಡುವೆಯೇ ಲಕ್ಷಾಂತರ ಭಕ್ತರು ದೇವಿಯ ದರ್ಶನಕ್ಕಾಗಿ ಕಾದು ನಿಂತಿದ್ದು, ನೂಕು ನುಗ್ಗಲು ಉಂಟಾಗಿದೆ. ಜನರನ್ನು ನಿಯಂತ್ರಿಸಲು ಪೊಲೀಸರು, ಜಿಲ್ಲಾಡಳಿತ ಸಿಬ್ಬಂದಿ ಪರದಾಟ ನಡೆಸಿದ್ದಾರೆ.