alex Certify BIG NEWS: ಹೆಚ್.ಡಿ.ಕೆ ಅಸೂಯೆಯಿಂದ ಟೀಕಿಸುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್ ಟಾಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹೆಚ್.ಡಿ.ಕೆ ಅಸೂಯೆಯಿಂದ ಟೀಕಿಸುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್ ಟಾಂಗ್

ಬೆಂಗಳೂರು: ಶಕ್ತಿ ಯೋಜನೆ ಸೇರಿದಂತೆ ಯಾವುದೇ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಯೂ ಇಲ, ನಿಲ್ಲಿಸುವುದೂ ಇಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ರಾಜ್ಯ ಸರ್ಕಾರ ದಿವಾಳಿಯಾಗುತ್ತಿದ್ದು, ಗ್ಯಾರಂಟಿ ಯೋಜನೆಗಳಿಂದಲೇ ಸರ್ಕಾರ ಪತನವಾಗಲಿದೆ ಎಂಬ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಸಿಎಂ, ಗ್ಯಾರಂಟಿ ಯೋಜನೆಗಳನ್ನು ಕಂಡು ಕುಮಾರಸ್ವಾಮಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಕಾಂಗ್ರೆಸ್ ನವರು 5 ಗ್ಯಾರಂಟಿ ಯೋಜನೆಗಳನ್ನು ಕೊಡುತ್ತಿದ್ದಾರೆ. ನಿಮ್ಮ ಅಧಿಕಾರ ಅವಧಿಯಲ್ಲಿ ಇಂತಹ ಒಂದು ಯೋಜನೆ ಕೊಟ್ಟಿಲ್ಲ, ಬಡವರಿಗೆ ನಿವೇಶನ ಕೊಟ್ಟಿಲ್ಲ, ಊರು ಅಭಿವೃದ್ಧಿ ಮಾಡಿಲ್ಲ. ಹೀಗಾಗಿ ಯಾಕೆ ಮತ ಕೇಳುತ್ತೀರಿ ಎಂದು ಜನ ಅವರನ್ನು ಧಿಕ್ಕರಿಸುತ್ತಿದ್ದಾರೆ. ಅದನ್ನು ಸಹಿಸಲಾಗದೆ ನನಗೆ ಈ ಅವಕಾಶ ಸಿಗಲಿಲ್ಲವಲ್ಲ ಎಂದು ಕುಮಾರಸ್ವಾಮಿ ಅಸೂಯೆಯಿಂದ ತಮ್ಮ ಕೈ ಹಿಸುಕಿಕೊಳ್ಳುತ್ತಿದ್ದಾರೆ ಎಂದರು.

ನಮ್ಮ ಐದು ಗ್ಯಾರಂಟಿ ಯೋಜನೆಗಳ ಪೈಕಿ ಯಾವುದೇ ಯೋಜನೆಯನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ. ಈ ಯೋಜನೆ ಸೌಲಭ್ಯ ಬೇಡ ಎಂದು ಹೇಳುವವರಿಗೆ ಬಲವಂತ ಮಾಡಲು ಸಾಧ್ಯವೇ? ಅವರ ಸಂಖ್ಯೆ ಶೇಕಡಾ 7-8 ರಷ್ಟು ಇರಬಹುದು. ಹಿಂದೆ ಅಡುಗೆ ಅನಿಲಕ್ಕೆ ನೀಡಲಾಗುತ್ತಿದ್ದ ಸಬ್ಸಿಡಿ ವಿಚಾರದಲ್ಲಿ ಪ್ರಧಾನಿ ಮೋದಿ ಅವರು ಸ್ವಇಚ್ಛೆಯಿಂದ ಸಬ್ಸಿಡಿ ತ್ಯಜಿಸುವವರಿಗೆ ಅವಕಾಶ ನೀಡಿದರು. ಆ ರೀತಿ ಆಲೋಚನೆ ಮಾಡುವುದಾಗಿ ಹೇಳಿದ್ದೇನೆ ಅಷ್ಟೇ ಎಂದರು.

ಕಾಂಗ್ರೆಸ್ ಅಧ್ಯಕ್ಷನಾಗಿ ಹಾಗೂ ಉಪಮುಖ್ಯಮಂತ್ರಿಯಾಗಿ ಮತ್ತೊಮ್ಮೆ ಸ್ಪಷ್ಟ ಪಡಿಸುತ್ತೇನೆ. ಐದೂ ಗ್ಯಾರಂಟಿ ಯೋಜನೆ ಮುಂದುವರಿಯುತ್ತವೆ. ಜನರಿಗೆ ಈ ಸೌಲಭ್ಯ ಮುಂದುವರಿಯಲಿದೆ. ಬೆಲೆ ಏರಿಕೆ ಸಮಸ್ಯೆ ನಿವಾರಿಸಿ ಜನರ ಬದುಕಿನಲ್ಲಿ ಬದಲಾವಣೆ ತರಲು ಮುಂದಾಗಿದ್ದು, ಜನ ನಮಗೆ ಆಶೀರ್ವಾದ ಮಾಡುತ್ತಾರೆ. ಈಗಿನ ಅವಧಿ ಜತೆಗೆ ಮುಂದಿನ ಐದು ವರ್ಷದ ಅವಧಿಯೂ ಸೇರಿ ಒಟ್ಟು ಎಂಟೂವರೆ ವರ್ಷ ಈ ಯೋಜನೆ ಮುಂದುವರಿಯಲಿದೆ ಎಂದು ತಿಳಿಸಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...