HomeKarnatakaಮೀನುಗಾರಿಕೆಗೆ ತೆರಳಿದ್ದ ವೇಳೆ ಮಗುಚಿದ ದೋಣಿ: ಸಮುದ್ರಕ್ಕೆ ಬಿದ್ದು ವ್ಯಕ್ತಿ ಸಾವು

ಮೀನುಗಾರಿಕೆಗೆ ತೆರಳಿದ್ದ ವೇಳೆ ಮಗುಚಿದ ದೋಣಿ: ಸಮುದ್ರಕ್ಕೆ ಬಿದ್ದು ವ್ಯಕ್ತಿ ಸಾವು

ಉಡುಪಿ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ವೇಳೆ ದೋಣಿಯಿಂದ ಬಿದ್ದು ಮೀನುಗಾರ ಮೃತಪಟ್ಟ ಘಟನೆ ಕುಂದಾಪುರದ ಬೀಜಾಡಿ ಚಾತ್ರಬೆಟ್ಟು ಸಮೀಪ ಗುರುವಾರ ನಡೆದಿದೆ.

ಬೀಜಾಡಿ ಗ್ರಾಮದ ಸಂಜೀವ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಸಮುದ್ರದಲ್ಲಿ ಮಿನಿ ಕೈರಂಪನಿ ದೋಣಿಯಲ್ಲಿ ಸಂಜೀವ ಅವರು ಸಮುದ್ರದ ನೀರಿನ ರಭಸಕ್ಕೆ ದೋಣಿ ಮಗುಚಿ ಬಿದ್ದಿದೆ. ಇದರಿಂದಾಗಿ ದೋಣಿಯಲ್ಲಿದ್ದ ಸಂಜೀವ್ ಸಮುದ್ರದ ನೀರಿಗೆ ಬಿದ್ದಿದ್ದಾರೆ. ತೀವ್ರ ಅಸ್ವಸ್ಥಗೊಂಡಿದ್ದ ಅವರನ್ನು ಕೋಟೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಮಾರ್ಗ ಮಧ್ಯದಲ್ಲೇ ಅವರು ಮೃತಪಟ್ಟಿದ್ದಾರೆ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular