HomeKarnatakaಉಪ ಚುನಾವಣೆ: ಕಣದಲ್ಲಿರುವ ಅಭ್ಯರ್ಥಿಗಳಿಗೆ ಚಿಹ್ನೆ ಹಂಚಿಕೆ

ಉಪ ಚುನಾವಣೆ: ಕಣದಲ್ಲಿರುವ ಅಭ್ಯರ್ಥಿಗಳಿಗೆ ಚಿಹ್ನೆ ಹಂಚಿಕೆ

ಬಳ್ಳಾರಿ: 95-ಸಂಡೂರು ವಿಧಾನಸಭೆ ಉಪಚುನಾವಣೆ ಹಿನ್ನಲೆಯಲ್ಲಿ ಸಂಡೂರು ಮತಕ್ಷೇತ್ರಕ್ಕೆ ಸ್ಪರ್ಧಿಸಿರುವ ಅಭ್ಯರ್ಥಿಗಳಿಗೆ ಚುನಾವಣಾ ಆಯೋಗದ ನಿಯಮಗಳ ಅನ್ವಯ ಚಿಹ್ನೆ ಹಂಚಿಕೆ ಮಾಡಲಾಗಿದೆ ಎಂದು ಸಂಡೂರು ವಿಧಾನಸಭೆ ಉಪಚುನಾವಣಾಧಿಕಾರಿ ರಾಜೇಶ್.ಹೆಚ್.ಡಿ ಅವರು ತಿಳಿಸಿದ್ದಾರೆ.

ಮಾನ್ಯತೆ ಪಡೆದ ರಾಷ್ಟ್ರೀಯ ಮತ್ತು ರಾಜ್ಯ ರಾಜಕೀಯ ಪಕ್ಷಗಳಾದ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಈ.ಅನ್ನಪೂರ್ಣ ಅವರಿಗೆ ಕೈ ಚಿಹ್ನೆ, ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಬಂಗಾರ ಹನುಮಂತ ಅವರಿಗೆ ಕಮಲ ಚಿಹ್ನೆ ನೀಡಲಾಗಿದೆ.

ಅದರಂತೆ ನೋಂದಾಯಿತ ರಾಜಕೀಯ ಪಕ್ಷಗಳಾದ ಕರ್ನಾಟಕ ಜನತಾ ಪಕ್ಷದ ಅಭ್ಯರ್ಥಿ ಅಂಜಿನಪ್ಪ ಎನ್. ಅವರಿಗೆ ವಜ್ರ ಮತ್ತು ಪಕ್ಷೇತರ ಅಭ್ಯರ್ಥಿಗಳಾದ ಟಿ.ಎಂ.ಮಾರುತಿ ಅವರಿಗೆ ಬ್ಯಾಟರಿ ಚಾರ್ಜ್, ಟಿ ಎರಿಸ್ವಾಮಿ ಅವರಿಗೆ ಟ್ರಕ್, ಎನ್.ವೆಂಕಣ್ಣ ಅವರಿಗೆ ಉಂಗುರ ಚಿಹ್ನೆ ನೀಡಲಾಗಿದ್ದು, ನ.13 ರಂದು ಮತದಾನ ನಡೆಯಲಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular