ಬೆಂಗಳೂರು: ಸುವರ್ಣ ಮಹೋತ್ಸವ ಪ್ರಶಸ್ತಿಯ ಮೊತ್ತವನ್ನು ರಾಜ್ಯ ಸರ್ಕಾರ ಹೆಚ್ಚಳ ಮಾಡಿದೆ. 20 ಸಾವಿರ ರೂಪಾಯಿ ಇದ್ದ ಮೊತ್ತವನ್ನು ಒಂದು ಲಕ್ಷ ರೂಪಾಯಿಗೆ ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ.
50 ಮಹಿಳಾ ಸಾಧಕರು, 50 ಪುರುಷ ಸಾಧಕರಿಗೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಈಗಾಗಲೇ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಇದೀಗ ಪ್ರಶಸ್ತಿಯ ಮೊತ್ತವನ್ನು ರಾಜ್ಯ ಸರ್ಕಾರ ಹೆಚ್ಚಳ ಮಾಡಿದೆ.
ಕರ್ನಾಟಕ ಸಂಭ್ರಮ -50 ಸುವರ್ಣ ಮಹೋತ್ಸವ ಅಂಗವಾಗಿ 100 ಸಾಧಕರಿಗೆ ಸುವರ್ಣ ಮಹೋತ್ಸವ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದ್ದು, ನಾಳೆ ಸರ್ಕಾರದ ವತಿಯಿಂದ ಸುವರ್ಣ ಮಹೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗುವುದು.