ಬೊಕಾರೊ: ಜಾರ್ಖಂಡ್ ನ ಬೊಕಾರೊ ಜಿಲ್ಲೆಯಲ್ಲಿ ಗುರುವಾರ ಪಟಾಕಿ ಅಂಗಡಿಗಳಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, 50ಕ್ಕೂ ಅಧಿಕ ಅಂಗಡಿಗಳಲ್ಲಿದ್ದ ಪಟಾಕಿಗಳು ಸುಟ್ಟು ಭಸ್ಮವಾಗಿವೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಬೊಕಾರೊ ಸ್ಟೀಲ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯ ಗರ್ಗಾ ಸೇತುವೆ ಬಳಿ ಈ ಘಟನೆ ನಡೆದಿದೆ.
ಜನರು ತಮ್ಮ ಪ್ರಾಣವನ್ನು ಉಳಿಸಿಕೊಳ್ಳಲು ಹರಸಾಹಸ ಪಟ್ಟಿದ್ದಾರೆ. ಬೆಂಕಿ ಹಚ್ಚಿದ ಸ್ಥಳದಿಂದ ಪರಾರಿಯಾಗಿದ್ದಾರೆ. ಪಟಾಕಿ ಅಂಗಡಿಗಳು ಇದ್ದ ಇಡೀ ಪ್ರದೇಶ ಬೆಂಕಿಯ ಜ್ವಾಲೆಯಿಂದ ಹೊತ್ತಿ ಉರಿದಿದೆ.
ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ.
ಈ ಅಂಗಡಿಕಾರರಿಗೆ ತಾತ್ಕಾಲಿಕವಾಗಿ ಪಟಾಕಿ ಅಂಗಡಿಗಳನ್ನು ಸ್ಥಾಪಿಸಲು ಜಿಲ್ಲಾಡಳಿತ ಅನುಮತಿ ನೀಡಿದೆ. ಪಟಾಕಿಗಳನ್ನು ಮಾರಾಟ ಮಾಡುವ ಸುಮಾರು 50 ತಾತ್ಕಾಲಿಕ ಅಂಗಡಿಗಳು ಸುಟ್ಟು ಹೋಗಿವೆ ಎಂದು ಬೊಕಾರೊ ಸಿಟಿ ಡಿಎಸ್ಪಿ ಅಲೋಕ್ ರಂಜನ್ ತಿಳಿಸಿದ್ದಾರೆ.
https://twitter.com/DrJain21/status/1851966007075545485