ಬೆಂಗಳೂರು: ಬೆಂಗಳೂರು ನಗರದಲ್ಲಿ ಪಟಾಕಿ ದುರ್ಘಟನೆ ಸಂಭವಿಸಿದ್ದು, ಪಟಾಕಿ ಸಿಡಿದು ಎಂಟು ಜನರ ಕಣ್ಣಿಗೆ ಗಾಯಗಳಾಗಿವೆ. ಗಾಯಗೊಂಡವರು ಬೇರೆ ಬೇರೆ ಕಣ್ಣಿನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇವರಲ್ಲಿ ಹೆಚ್ಚಿನವರು ಮಕ್ಕಳಾಗಿದ್ದಾರೆ.
ಪಟಾಕಿ ಸಿಡಿದು ಗಾಯಗೊಂಡ ಮೂವರು ಮಕ್ಕಳ ನಾರಾಯಣ ನೇತ್ರಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಮಿಂಟೋ ಆಸ್ಪತ್ರೆಯಲ್ಲಿ ಐದು ವರ್ಷದ ಬಾಲಕ ಮತ್ತು 18 ವರ್ಷದ ಯುವಕ ಸೇರಿ ಇಬ್ಬರಿಗೆ ಚಿಕಿತ್ಸೆ ನೀಡಲಾಗಿದೆ.
ಬೇರೆಯವರು ಪಟಾಕಿ ಸಿಡಿಸುವುದನ್ನು ಸಮೀಪದಲ್ಲಿ ನಿಂತು ನೋಡುವಾಗ ಕಣ್ಣಿಗೆ ಸಿಡಿದು ಬಾಲಕನಿಗೆ ಗಾಯವಾಗಿದೆ. ಆತನಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಗುಣಮುಖವಾದ ನಂತರ ದೃಷ್ಟಿ ದೋಷ ಪ್ರಮಾಣ ಗೊತ್ತಾಗುತ್ತೆ ಎಂದು ಹೇಳಲಾಗಿದೆ.
ಇನ್ನೆರಡು ಪ್ರತ್ಯೇಕ ಪ್ರಕರಣಗಳಲ್ಲಿ ಪಟಾಕಿ ಸಿಡಿಸುವುದನ್ನು ನೋಡುತ್ತಿದ್ದ ಮೂರು ವರ್ಷದ ಹೆಣ್ಣು ಮಗುವಿನ ಕಣ್ಣಿಗೆ ತಾಗಿ ಕಾರ್ನಿಯಾಗೆ ಹಾನಿಯಾಗಿದೆ. ಬೆಂಗಳೂರಲ್ಲಿ 8 ಮಂದಿ ಕಣ್ಣಿಗೆ ಹಾನಿಯಾಗಿದೆ ಎಂದು ಹೇಳಲಾಗಿದೆ.