ಬೆಂಗಳೂರು: ಒಳ ಮೀಸಲಾತಿ ನೀಡುವ ಕುರಿತಾಗಿ ಸರ್ಕಾರ ರಚಿಸುವ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಅಧ್ಯಕ್ಷತೆಯ ಆಯೋಗಕ್ಕೆ ಮೂರು ತಿಂಗಳಲ್ಲೇ ವರದಿ ನೀಡುವಂತೆ ಷರತ್ತು ವಿಧಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಒಳ ಮೀಸಲಾತಿ ನೀಡುವುದನ್ನು ವಿಳಂಬ ಮಾಡುವ ಅಥವಾ ಕಾಲಹರಣ ಮಾಡುವ ಉದ್ದೇಶ ಸರ್ಕಾರಕ್ಕೆ ಇಲ್ಲ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.
ಆಯೋಗವು ನಿಗದಿತ ಗಡುವಿನೊಳಗೆ ವರದಿ ಸಲ್ಲಿಸಲು ಬೇಕಾದ ಅಗತ್ಯ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದೆ. ಸಮರ್ಪಕವಾಗಿ, ವೈಜ್ಞಾನಿಕವಾಗಿ, ವಿವಾದಗಳಿಗೆ ಆಸ್ಪದ ನೀಡದಂತೆ ಒಳ ಮೀಸಲಾತಿ ಜಾರಿ ಮಾಡುವ ಉದ್ದೇಶದಿಂದಲೇ ಸರ್ಕಾರ ಆಯೋಗ ರಚಿಸುವ ತೀರ್ಮಾನ ಕೈಗೊಂಡಿದೆ ಎಂದು ಸಿಎಂ ತಿಳಿಸಿದ್ದಾರೆ.
ಸುಪ್ರೀಂಕೋರ್ಟ್ ಆದೇಶದಂತೆ ಒಳ ಮೀಸಲಾತಿಯನ್ನು ವೈಜ್ಞಾನಿಕವಾಗಿ, ಸಮರ್ಪಕವಾಗಿ ಅನುಷ್ಠಾನಗೊಳಿಸಲು ಸೂಕ್ತ ಅಂಕಿ ಅಂಶ ಅಗತ್ಯವಿದ್ದು, ಅಂಕಿ ಅಂಶಗಳನ್ನು ಆಯೋಗ ವೈಜ್ಞಾನಿಕವಾಗಿ ನಿರ್ಧರಿಸಲಿದೆ ಎಂದು ತಿಳಿಸಿದ್ದಾರೆ.