alex Certify ಚುನಾವಣಾಧಿಕಾರಿಗಳ ದಾಳಿ: ಲಕ್ಷಾಂತರ ರೂಪಾಯಿ ಮೌಲ್ಯದ ಸೀರೆ, ಸಿದ್ದ ಉಡುಪು ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚುನಾವಣಾಧಿಕಾರಿಗಳ ದಾಳಿ: ಲಕ್ಷಾಂತರ ರೂಪಾಯಿ ಮೌಲ್ಯದ ಸೀರೆ, ಸಿದ್ದ ಉಡುಪು ವಶಕ್ಕೆ

ರಾಮನಗರ: ರಾಮನಗರ ಜಿಲ್ಲೆ ಬಿಡದಿಯ ಭೀಮೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಖಾಸಗಿ ಗಾರ್ಮೆಂಟ್ಸ್ ಗೆ ಸೇರಿದ ಗೋದಾಮಿನ ಮೇಲೆ ಗುರುವಾರ ರಾತ್ರಿ 8 ಗಂಟೆ ವೇಳೆಗೆ ಬಿಡದಿ ಪೊಲೀಸರ ನೆರವಿನೊಂದಿಗೆ ಚುನಾವಣಾ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಗೋದಾಮಿನಲ್ಲಿ ಇದ್ದ ಅಪಾರ ಪ್ರಮಾಣದ ಸೀರೆ ಮತ್ತು ಸಿದ್ಧ ಉಡುಪುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಲಾಗಿದೆ. ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದೆ. ಇಂತಹ ಸಂದರ್ಭದಲ್ಲಿ ಅಧಿಕ ಪ್ರಮಾಣದಲ್ಲಿ ಸೀರೆ, ಶರ್ಟ್ ಹಾಗೂ ಪಂಚೆಗಳನ್ನು ಸಂಗ್ರಹಿಸಿ ಇಡಲಾಗಿದ್ದು, ಈ ಬಗ್ಗೆ ಮಾಹಿತಿ ಪಡೆದ ಚುನಾವಣಾ ಅಧಿಕಾರಿಗಳು ಗೋದಾಮಿನ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಉಪ ಚುನಾವಣೆಯಲ್ಲಿ ಹಂಚಿಕೆ ಮಾಡಲು ಇವುಗಳನ್ನು ಶೇಖರಿಸಿಡಲಾಗಿತ್ತೆ ಎನ್ನುವುದರ ಕುರಿತಾಗಿ ಪರಿಶೀಲನೆ ನಡೆಸಿದ್ದಾರೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಅಧಿಕಾರಿಯಾಗಿರುವ ಉಪ ವಿಭಾಗಾಧಿಕಾರಿ ಬಿನೋಯ್ ನೇತೃತ್ವದಲ್ಲಿ ಚುನಾವಣಾಧಿಕಾರಿಗಳ ತಂಡ ಪರಿಶೀಲನೆ ನಡೆಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...