alex Certify ರಾಜ್ಯ ಸರ್ಕಾರದಿಂದ ‘SC’ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯ ಸರ್ಕಾರದಿಂದ ‘SC’ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ.!

ಬೆಂಗಳೂರು : ರಾಜ್ಯ ಸರ್ಕಾರ (SC) ಪರಿಶಿಷ್ಟ ಜಾತಿ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ್ದು, ವಿದ್ಯಾರ್ಥಿ ವೇತನ / ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನಿಸಿದೆ.

2024-25ನೇ ಸಾಲಿನಲ್ಲಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ, ಅನೈರ್ಮಲ್ಯ ವ್ಯಕ್ತಿಯಲ್ಲಿ ತೊಡಗಿರುವ ಪೋಷಕರ ಮಕ್ಕಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಕಾರ್ಯಕ್ರಮದಡಿ ಅರ್ಹ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ, 8ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಆದಾಯ ಮಿತಿ ರೂ. 6 ಲಕ್ಷ ಹಾಗೂ 9-10ನೇ ತರಗತಿಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಾರ್ಷಿಕ ಆದಾಯ ಮಿತಿ ರೂ.2.5 ಲಕ್ಷಗಳು.
ಅರ್ಜಿ ಸಲ್ಲಿಸಿವ ವೆಬ್ ಸೈಟ್ : https://ssp.postmatric.karnataka.gov.in/
Bio Metric e-Authentication : ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ (9 ಮತ್ತು 10ನೇ ತರಗತಿ), ಅನೈರ್ಮಲ್ಯ ವೃತ್ತಿಯಲ್ಲಿ ತೊಡಗಿರುವ ಪೋಷಕರ ಮಕ್ಕಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಕಾರ್ಯಕ್ರಮದಡಿ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಕಡ್ಡಾಯವಾಗಿ Bio Metric e-Authentication ಒಳಗಾಗಬೇಕಾಗಿರುತ್ತದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿ ಮತ್ತು EDCS ನಾಗರಿಕ ಸೇವಾ ಕೇಂದ್ರಗಳಾದ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳಲ್ಲಿ Bio Metric e-Authentication ಮಾಡಿಸಲು ಅವಕಾಶ ಕಲ್ಪಿಸಲಾಗಿರುತ್ತದೆ. ಸದರಿ ಸೇವೆಯು ಉಚಿತವಾಗಿದ್ದು, EDCS ನಾಗರಿಕ ಸೇವಾ ಕೇಂದ್ರಗಳಲ್ಲಿ ವಿದ್ಯಾರ್ಥಿಯು ಯಾವುದೇ ಹಣ ಪಾವತಿಸುವಂತಿಲ್ಲ.

ವಿದ್ಯಾರ್ಥಿವೇತನ/ಪ್ರೋತ್ಸಾಹ ಧನ ಕಾರ್ಯಕ್ರಮದಡಿ ಮಂಜೂರಾದ ಮೊತ್ತವನ್ನು ವಿದ್ಯಾರ್ಥಿಗಳ ಆಧಾರ್ ಜೋಡಿತ ಬ್ಯಾಂಕ್ ಖಾತೆಗೆ ನೇರವಾಗಿ ಜಮೆ ಮಾಡಲಾಗುತ್ತಿದ್ದು, ಸದರಿ ಪ್ರಕ್ರಿಯೆಗೆ ವಿದ್ಯಾರ್ಥಿಯ ಆಧಾರ್ ಸಂಖ್ಯೆಯನ್ನು ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ಜೋಡಣೆ ಮಾಡುವುದು ಕಡ್ಡಾಯವಾಗಿರುತ್ತದೆ.

ಪ್ರೋತ್ಸಾಹ ಧನ ಕಾರ್ಯಕ್ರಮ

10ನೇ ತರಗತಿ/ಎಸ್. ಎಸ್. ಎಲ್. ಸಿ. ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ, ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಮೆಟ್ರಿಕ್ ನಂತರದ ಪ್ರೋತ್ಸಾಹ ಧನ

12ನೇ ತರಗತಿ/ಪಿ.ಯು.ಸಿ. ಪಾಲಿಟೆಕ್ನಿಕ್ ಡಿಪ್ಲೋಮಾ, ಐ.ಟಿ.ಐ., ಸ್ನಾತಕ ಪದವಿ, ಸ್ನಾತಕೋತ್ತರ ಪದವಿ ಕೋರ್ಸುಗಳಲ್ಲಿ ಪ್ರಥಮ ಪ್ರಯತ್ನದಲ್ಲಿ, ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

V. ವಿದ್ಯಾರ್ಥಿಯು ಕೈಗೊಳ್ಳಬೇಕಾದ ಕ್ರಮಗಳು
1. ಆಧಾರ್ ಸೇವಾ ಕೇಂದ್ರಕ್ಕೆ ಭೇಟಿ ನೀಡಿ, ತಮ್ಮ ಆಧಾರ್ Active ಇರುವ ಬಗ್ಗೆ ಖಚಿತಪಡಿಸಿಕೊಳ್ಳುವುದು. ಆಧಾರ್ ವಿವರಗಳನ್ನು ಹಾಗೂ Biometric ವಿವರಗಳನ್ನು Update ಮಾಡಿಸುವುದು.
2. ಬ್ಯಾಂಕ್ ಖಾತೆ Active ಇರುವ ಬಗ್ಗೆ ಹಾಗೂ ಸದರಿ ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಸೀಡಿಂಗ್ ಆಗಿರುವ ಬಗ್ಗೆ ಖಚಿತ ಮಾಡಿಕೊಳ್ಳುವುದು.
3. ಒಂದುವೇಳೆ ತಮ್ಮ ಆಧಾರ್ ಬ್ಯಾಂಕ್ ಖಾತೆಯೊಂದಿಗೆ ಸೀಡಿಂಗ್ ಆಗದೇ ಇದ್ದಲ್ಲಿ, ಈ ಬಗ್ಗೆ ಬ್ಯಾಂಕ್ ಅಧಿಕಾರಿಗಳನ್ನು ಸಂಪರ್ಕಿಸಿ ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಜೋಡಣೆ ಮಾಡಲು ಕ್ರಮವಹಿಸುವುದು ಅಥವಾ ಅಂಚೆ ಕಛೇರಿಯಲ್ಲಿ IPPB ಖಾತೆಯನ್ನು ತೆರೆಯುವುದು.
4. ಆಧಾರ್ ಜೋಡಣೆ ಬಗ್ಗೆ DBT Karnataka Mobile App ನಲ್ಲಿ ಹರಿತೀಲಿಸಿ ಖಚಿತ ಪಡಿಸಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಜಿಲ್ಲಾ ಅಥವಾ ತಾಲ್ಲೂಕು ಮಟ್ಟದ ಅಧಿಕಾರಿಗಳ ಕಛೇರಿಯನ್ನು ಸಂಪರ್ಕಿಸುವುದು ಎಂದು ಆಯುಕ್ತರು ಸಮಾಜ ಕಲ್ಯಾಣ ಇಲಾಖೆ ಪ್ರಕಟಣೆ ಹೊರಡಿಸಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...