ಬೆಂಗಳೂರು: ಸಚಿವರು, ಶಾಸಕರು, ಸಂಸದರು, ಕನ್ನಪರ ಸಂಘಟನೆ, ರೈತ ಮುಖಂಡರ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನು ರಾಜ್ಯ ಸರ್ಕಾರ ಹಿಂಪಡೆದಿತ್ತು. ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ ಗೆ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹಿಂಪಡೆಯಲಾಗಿದೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರದ ಹಾಲಿ ಹಾಗೂ ಮಾಜಿ ಸಚಿವರು, ಹಾಲಿ ಹಾಗೂ ಮಾಜಿ ಶಾಸಕರು, ಕನ್ನಡಪರ ಸಂಘಟನೆ ಹೋರಾಟಗಾರರು, ರೈತ ಮುಖಂಡರ ಮೇಲೆ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಕ್ರಿಮಿನಲ್ ಕೇಸ್ ದಾಖಲಾಗಿತ್ತು. ಈ ಕೇಸ್ ಗಳನ್ನು ರಾಜ್ಯ ಸರ್ಕಾರ ಹಿಂಪಡೆದಿದ್ದು, ಇದನ್ನು ಪ್ರಶ್ನಿಸಿ ಕೆಲವರು ಹೈಕೋರ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಇದೀಗ ಆ ಅರ್ಜಿ ಹಿಂಪಡೆಯಲಾಗಿದೆ.
ವಕೀಲ ಗಿರೀಶ್ ಭಾರದ್ವಾಜ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ನ್ಯಾ.ಹೇಮಂತ್ ಚಂದನ್ ಗೌಡರ್ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ಪ್ರಕರಣದ ಕುರಿತು ಮಾಹಿತಿ ನೀಡಲು ಮುಂಡಾದರು. ಇದಕ್ಕೆ ಪೀಠ ಸಾಮಾಜಿಕ ಹೋರಾಟಗಾರರು, ರೈತ ಮುಖಂದರು, ರಾಜಕಾರಣಿಗಳ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನು ಹಿಂಪಡೆಯಲಾಗಿದೆ. ಈ ಸಂಬಂಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸುವುದು ಸೂಕ್ತ ಎಂದು ಅಭಿಪ್ರಾಯಪಟ್ಟಿತು. ಈ ಹಿನ್ನೆಲೆಯಲ್ಲಿ ಅರ್ಜಿ ಹಿಂಪಡೆಯಲಾಗಿದೆ.