ರಾಂಚಿ: ಜಾರ್ಖಂಡ್’ನ ಕೆಲವು ಭಾಗಗಳಲ್ಲಿ ಶನಿವಾರ ಬೆಳಿಗ್ಗೆ 3.6 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿಗೆ ಹಾನಿಯಾದ ಬಗ್ಗೆ ತಕ್ಷಣದ ವರದಿಯಾಗಿಲ್ಲ ಎಂದು ಅವರು ಹೇಳಿದರು.
ಬೆಳಿಗ್ಗೆ 9.20 ರ ಸುಮಾರಿಗೆ ಸಂಭವಿಸಿದ ಭೂಕಂಪದ ಕೇಂದ್ರಬಿಂದು ರಾಜ್ಯದ ರಾಜಧಾನಿ ರಾಂಚಿಯಿಂದ 35 ಕಿ.ಮೀ ದೂರದಲ್ಲಿರುವ ಖುಂಟಿ ಜಿಲ್ಲೆಯಲ್ಲಿತ್ತು ಎಂದು ಹಿರಿಯ ಹವಾಮಾನ ತಜ್ಞ ಉಪೇಂದ್ರ ಶ್ರೀವಾಸ್ತವ ತಿಳಿಸಿದ್ದಾರೆ.ಭೂಕಂಪದ ಆಳವು ಐದು ಕಿಲೋಮೀಟರ್ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ವರದಿ ತಿಳಿಸಿದೆ.ಪರಿಣಾಮವು ಸಣ್ಣದಾಗಿತ್ತು ಎಂದು ಅವರು ಹೇಳಿದರು.ಸೆರೈಕೆಲಾ-ಖಾರ್ಸ್ವಾನ್ ಜಿಲ್ಲೆಯ ಜೆಮ್ಷೆಡ್ಪುರ ಮತ್ತು ಕಾಂದ್ರಾದಲ್ಲಿಯೂ ಭೂಕಂಪನದ ಅನುಭವವಾಗಿದೆ.