HomeKarnatakaBREAKING: ಹಾಸನಾಂಬೆ ಆದಾಯ ಸಂಗ್ರಹದಲ್ಲಿ ದಾಖಲೆ: ಎಂಟೇ ದಿನದಲ್ಲಿ 18 ಲಕ್ಷ ಭಕ್ತರ ದರ್ಶನ, 8...

BREAKING: ಹಾಸನಾಂಬೆ ಆದಾಯ ಸಂಗ್ರಹದಲ್ಲಿ ದಾಖಲೆ: ಎಂಟೇ ದಿನದಲ್ಲಿ 18 ಲಕ್ಷ ಭಕ್ತರ ದರ್ಶನ, 8 ಕೋಟಿ ರೂ. ಆದಾಯ

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬ ದೇವಾಲಯದಲ್ಲಿ ಕಳೆದ ಎಂಟು ದಿನದಲ್ಲಿ 18 ಲಕ್ಷ ಭಕ್ತರು ದೇವಿಯ ದರ್ಶನ ಪಡೆದುಕೊಂಡಿದ್ದಾರೆ. ನಾಳೆ ಮುಂಜಾನೆ ನಾಲ್ಕು ಗಂಟೆಯವರೆಗೆ ದರ್ಶನಕ್ಕೆ ಅವಕಾಶವಿದೆ.

ಆದಾಯ ಸಂಗ್ರಹದಲ್ಲಿಯೂ ಈ ಬಾರಿ ಹಾಸನಾಂಬ ದೇವಾಲಯ ದಾಖಲೆ ಬರೆದಿದೆ. ಎಂಟು ದಿನದಲ್ಲಿ 8 ಕೋಟಿ ರೂ. ಸಂಗ್ರಹವಾಗಿದೆ. ವಿಶೇಷ ಪಾಸ್, ಲಡ್ಡು ಪ್ರಸಾದ ಮಾರಾಟದಿಂದ 8 ಕೋಟಿ ರೂಪಾಯಿ ಸಂಗ್ರಹವಾಗಿದೆ.

ದರ್ಶನಕ್ಕೆ ಇಂದೇ ಕೊನೆ ದಿನವಾಗಿದ್ದು, ನಾಳೆ ಬೆಳಗಿನ ಜಾವ 4 ಗಂಟೆಯವರೆಗೆ ದರ್ಶನಕ್ಕೆ ಅವಕಾಶವಿರುತ್ತದೆ. ನಂತರ ಪೂಜಾ ವಿಧಿ ವಿಧಾನಗಳೊಂದಿಗೆ ದೇವಾಲಯದ ಬಾಗಿಲನ್ನು ಮುಚ್ಚಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂದು ಬೆಳಗ್ಗೆ 9 ಗಂಟೆಯವರೆಗೆ ಸುಮಾರು 8 ಕೋಟಿ ರೂ. ಆದಾಯ ಸಂಗ್ರಹವಾಗಿದೆ. ಕಳೆದ ವರ್ಷ 14 ಲಕ್ಷ ಭಕ್ತರು ದೇವಿಯ ದರ್ಶನ ಪಡೆದಿದ್ದು, ಈ ವರ್ಷ ಎಂಟು ದಿನದಲ್ಲಿ ಬರೋಬ್ಬರಿ 18 ಲಕ್ಷ ಭಕ್ತರು ದೇವಿಯ ದರ್ಶನ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular