HomeKarnatakaBREAKING: ಟಾಟಾ ಏಸ್ ವಾಹನ ಪಲ್ಟಿ: 25 ಜನರಿಗೆ ಗಂಭೀರ ಗಾಯ

BREAKING: ಟಾಟಾ ಏಸ್ ವಾಹನ ಪಲ್ಟಿ: 25 ಜನರಿಗೆ ಗಂಭೀರ ಗಾಯ

ಚಾಮರಾಜನಗರ: ದೇವಸ್ಥಾನದಿಂದ ವಾಪಾಸ್ ಆಗುತ್ತಿದ್ದಾಗ ಟಾಟಾ ಏಸ್ ವಾಹನ ಪಲ್ಟಿಯಾಗಿ 25 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಹುಣಸೇಪಾಳ್ಯ ಬಳಿ ನಡೆದಿದೆ.

ತಟ್ಟೆಕೆರೆ ಮಹದೇಶ್ವರ ದೇವಸ್ಥಾನದಿಂದ ವಾಪಾಸ್ ಆಗುತ್ತಿದ್ದ ವೇಳೆ ಟಾಟಾ ಏಸ್ ವಾಹನ ಚಾಲಕನ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. 25 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳು ವಿ.ಎಸ್.ದೊಡ್ಡಿ ಗ್ರಾಮದವರು.

ಗಾಯಾಳುಗಳನ್ನು ಕೊಳ್ಳೆಗಾಲ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular