HomeKarnatakaಮತದಾರರಿಗೆ ಲುಲು ಮಾಲ್ ಗಿಫ್ಟ್ ಕೂಪನ್ ಹಂಚಿ ಕಾಂಗ್ರೆಸ್ ಅಕ್ರಮ: HDK ಆರೋಪ

ಮತದಾರರಿಗೆ ಲುಲು ಮಾಲ್ ಗಿಫ್ಟ್ ಕೂಪನ್ ಹಂಚಿ ಕಾಂಗ್ರೆಸ್ ಅಕ್ರಮ: HDK ಆರೋಪ

ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಲುಲು ಮಾಲ್ ಗಿಫ್ಟ್ ಕೂಪನ್ ಗಳನ್ನು ಮತದಾರರಿಗೆ ಹಂಚಿಕೊಂಡು ಚುನಾವಣಾ ಆಕ್ರಮ ನಡೆಸಲು ಕಾಂಗ್ರೆಸ್ ಮುಂದಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.

ಚನ್ನಪಟ್ಟಣದಲ್ಲಿ ಪ್ರಚಾರ ಕೈಗೊಂಡಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಆಡಳಿತರೂಢ ಕಾಂಗ್ರೆಸ್ ಪಕ್ಷ ಉಪ ಚುನಾವಣೆಯಲ್ಲಿ ಭಾರೀ ಅಕ್ರಮ ನಡೆಸಲು ಸಂಚು ರೂಪಿಸಿದೆ. ಚುನಾವಣಾ ಆಯೋಗ ಈ ಬಗ್ಗೆ ಗಮನಹರಿಸಬೇಕು. ಪಾರದರ್ಶಕವಾಗಿ ಚುನಾವಣೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

ಕಳೆದ ಚುನಾವಣೆಯಲ್ಲೂ ಕಾಂಗ್ರೆಸ್ ವ್ಯಾಪಕ ಅಕ್ರಮ ನಡೆಸಿತ್ತು. ಹಲವು ಕ್ಷೇತ್ರಗಳಲ್ಲಿ ಲುಲು ಮಾಲ್ ಗಿಫ್ಟ್ ಕೂಪನ್ ಗಳನ್ನು ಹಂಚಿಕೆ ಮಾಡಿದ್ದು, ಚುನಾವಣೆ ಮುಗಿದ ಬಳಿಕ ಹಣವೂ ಇಲ್ಲ, ಕೂಪನ್ನೂ ಇಲ್ಲ ಎಂದು ಕಾಂಗ್ರೆಸ್ ಪಕ್ಷಕ್ಕೆ ಜನ ಹಿಡಿಶಾಪ ಹಾಕಿದ್ದರು. ಈ ಬಾರಿ ಇಂತಹ ಮೋಸಕ್ಕೆ ಒಳಗಾಗಬೇಡಿ ಎಂದು ಮತದಾರರಿಗೆ ಮನವಿ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular