ಕೇರಳದ ಲೋಕಸಭಾ ಕ್ಷೇತ್ರದಲ್ಲಿ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ.
ವಯನಾಡು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಪ್ರಿಯಾಂಕಾ ಗಾಂಧಿ ಕ್ಷೇತ್ರದ ವಿವಿಧೆಡೆ ಇಂದು ಪ್ರಚಾರ ನಡೆಸಲಿದ್ದು, ಮತ ಯಾಚಿಸಲಿದ್ದಾರೆ.
ಕಳೆದ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ವಯನಾಡು ಕ್ಷೇತ್ರದಿಂದ ರಾಹುಲ್ ಗಾಂಧಿ ಜಯಗಳಿಸಿದ್ದರು. ರಾಯಬರೇಲಿಯಲ್ಲೂ ಅವರು ಚುನಾಯಿತರಾಗಿದ್ದರು. ರಾಯಬರೇಲಿ ಉಳಿಸಿಕೊಂಡು ವಯನಾಡು ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರಿಂದ ಉಪ ಚುನಾವಣೆ ಘೋಷಣೆಯಾಗಿದೆ.
ಇದೇ ಮೊದಲ ಬಾರಿಗೆ ಚುನಾವಣಾಯಲ್ಲಿ ಸ್ಪರ್ಧಿಸಿರುವ ಪ್ರಿಯಾಂಕಾ ಗಾಂಧಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಅವರ ವಿರುದ್ಧ ಬಿಜೆಪಿಯಿಂದ ನವ್ಯಾ ಹರಿದಾಸ್ ಸ್ಪರ್ಧಿಸಿದ್ದಾರೆ.
ಉಪಚುನಾವಣೆಯ ಮತದಾನ ನವೆಂಬರ್ 13 ರಂದು ನಡೆಯಲಿದೆ. ನವೆಂಬರ್ 23 ರಂದು ಫಲಿತಾಂಶಗಳನ್ನು ಪ್ರಕಟಿಸಲಾಗುವುದು.