HomeEntertainmentಐದಾರು ದಿನಗಳ ಹಿಂದೆಯೇ ನಟ, ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡ ಶಂಕೆ

ಐದಾರು ದಿನಗಳ ಹಿಂದೆಯೇ ನಟ, ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡ ಶಂಕೆ

ಬೆಂಗಳೂರು: ನಟ, ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡ ಮಾದನಾಯನಹಳ್ಳಿಯ ಅಪಾರ್ಟ್ ಮೆಂಟ್ ಗೆ ಬೆಂಗಳೂರು ಗ್ರಾಮಾಂತರ ಎಸ್ಪಿ ಸಿ.ಕೆ. ಬಾಬಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಗುರುಪ್ರಸಾದ್ ಸಾವಿನ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ತನಿಖೆಯ ಬಳಿಕ ಎಲ್ಲವೂ ಗೊತ್ತಾಗಲಿದೆ. ಅಪಾರ್ಟ್ಮೆಂಟ್ ಗೆ ಹೋಗೋದು, ಬರುವುದನ್ನು ಮಾಡುತ್ತಿದ್ದರು. ಕಳೆದ ಐದಾರು ದಿನಗಳಿಂದ ಗುರುಪ್ರಸಾದ್ ಅಪಾರ್ಟ್ಮೆಂಟ್ ನಿಂದ ಹೊರಗೆ ಬಂದಿರಲಿಲ್ಲ. ಸ್ಥಳೀಯ ನಿವಾಸಿಗಳು ಹೇಳುವ ಪ್ರಕಾರ ಅವರು ಐದಾರು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಇತ್ತೀಚೆಗೆ ಕೆಲವು ವಿಚಾರಗಳ ಬಗ್ಗೆ, ಹಣಕಾಸು ವಿಚಾರವಾಗಿಯೂ ಗುರುಪ್ರಸಾದ್ ಬೇಸರದಲ್ಲಿದ್ದರು ಎನ್ನುವ ಮಾಹಿತಿ ಗೊತ್ತಾಗಿದೆ. ಫ್ಲ್ಯಾಟ್ ಬಾಗಿಲು ತೆಗೆದು ತಜ್ಞರ ತಂಡ ಪರಿಶೀಲನೆ ನಡೆಸಿದೆ. ಘಟನೆಯ ಬಗ್ಗೆ ಮಾದನಾಯಕನಹಳ್ಳಿ ಠಾಣೆಯಲ್ಲಿ ಕೇಸು ದಾಖಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲ ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular