HomeKarnatakaSHOCKING: ದೀಪಾವಳಿ ಸಂಭ್ರಮದ ನಡುವೆ ಪಟಾಕಿ ಸಿಡಿದು 150 ಜನರ ಕಣ್ಣಿಗೆ ಗಾಯ: 9 ಮಂದಿ...

SHOCKING: ದೀಪಾವಳಿ ಸಂಭ್ರಮದ ನಡುವೆ ಪಟಾಕಿ ಸಿಡಿದು 150 ಜನರ ಕಣ್ಣಿಗೆ ಗಾಯ: 9 ಮಂದಿ ದೃಷ್ಟಿ ಕಳೆದುಕೊಳ್ಳುವ ಸಾಧ್ಯತೆ

 ಬೆಂಗಳೂರು: ಪಟಾಕಿ ಸಿಡಿತದಿಂದ ಕಣ್ಣಿಗೆ ಗಾಯಗೊಂಡವರ ಸಂಖ್ಯೆ ಈ ವರ್ಷ ಭಾರಿ ಏರಿಕೆಯಾಗಿದೆ. ಸುಮಾರು 150 ಜನರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದಾರೆ. 30 ಜನರ ಕಣ್ಣಿಗೆ ಗಂಭೀರ ಗಾಯಗಳಾಗಿವೆ. 9 ಜನ ದೃಷ್ಟಿ ಕಳೆದುಕೊಳ್ಳುವ ಸಂಭವವಿದೆ ಎಂದು ಹೇಳಲಾಗಿದೆ.

ದೀಪಾವಳಿ ಹಬ್ಬದ ಆರಂಭದಿಂದ ಭಾನುವಾರ ಸಂಜೆಯವರೆಗೆ ನಾರಾಯಣ ನೇತ್ರಾಲಯದ ಆಸ್ಪತ್ರೆಗಳಲ್ಲಿ 73 ಜನ ಪಟಾಕಿಗೆ ಸಂಬಂಧಿಸಿದ ಗಾಯಗಳಿಗೆ ಚಿಕಿತ್ಸೆ ಪಡೆದಿದ್ದಾರೆ. ಇವರಲ್ಲಿ 35 ಮಕ್ಕಳು ಸೇರಿದ್ದಾರೆ. 73 ಜನರಲ್ಲಿ ಅರ್ಧದಷ್ಟು ಜನ ಪಟಾಕಿ ಸಿಡಿಸುವುದನ್ನು ನೋಡುತ್ತಾ ನಿಂತಿದ್ದ ವೇಳೆ, ಅದೇ ಮಾರ್ಗದಲ್ಲಿ ಹೋಗುವ ದಾರಿಹೋಕರು ಪಟಾಕಿ ಕಿಡಿ ಸಿಡಿದು ಗಾಯಗೊಂಡಿದ್ದಾರೆ. ಉಳಿದವರು ಪಟಾಕಿ ಸಿಡಿಸುವಾಗ ಗಾಯ ಮಾಡಿಕೊಂಡಿದ್ದಾರೆ.

19 ಜನರಿಗೆ ಗಂಭೀರ ಗಾಯಗಳಾಗಿವೆ. ಮಿಂಟೋ ಆಸ್ಪತ್ರೆ ಯಲ್ಲಿ 54 ಜನರಿಗೆ ಚಿಕಿತ್ಸೆ ನೀಡಲಾಗಿದೆ. ನಾರಾಯಣ ನೇತ್ರಾಲಯದಲ್ಲಿ 73 ಜನರಿಗೆ, ಶಂಕರ ಕಣ್ಣಿನ ಆಸ್ಪತ್ರೆಯಲ್ಲಿ 18, ಅಗರ್ವಾಲ್ ಕಣ್ಣಿನ ಆಸ್ಪತ್ರೆಯಲ್ಲಿ 15 ಜನ ಪಟಾಕಿ ಸಿಡಿತದ ಗಾಯಗಳಿಗೆ ಚಿಕಿತ್ಸೆ ಪಡೆದುಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular