HomeKarnatakaಪತ್ರಕರ್ತರ ಹೆಸರಲ್ಲಿ ಸುಲಿಗೆ: ಇಬ್ಬರು ಅರೆಸ್ಟ್

ಪತ್ರಕರ್ತರ ಹೆಸರಲ್ಲಿ ಸುಲಿಗೆ: ಇಬ್ಬರು ಅರೆಸ್ಟ್

ಶಿವಮೊಗ್ಗ: ಪತ್ರಕರ್ತರು ಎಂದು ಹೇಳಿಕೊಂಡು ಸುಲಿಗೆ ಮಾಡಿದ್ದ ಇಬ್ಬರನ್ನು ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.

ಶಿವಮೊಗ್ಗದ ನವೀನ್ ಮತ್ತು ಸತೀಶ್ ಬಂಧಿತ ಆರೋಪಿಗಳು. ಹೊಳೆಹೊನ್ನೂರು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ರಾತ್ರಿ ಅಡಿಕೆ ಸಾಗಿಸುತ್ತಿದ್ದ ಲಾರಿಯನ್ನು ಅಡ್ಡಗಟ್ಟಿದ್ದಾರೆ. ತಾವು ಪತ್ರಕರ್ತರು ಎಂದು ಹೇಳಿಕೊಂಡು ಲಾರಿ ದಾಖಲೆ ಮತ್ತು ಲಾರಿಯಲ್ಲಿದ್ದ ಅಡಿಕೆಗೆ ಸಂಬಂಧಿಸಿದ ದಾಖಲೆ ಕೊಡುವಂತೆ ಬಲವಂತ ಮಾಡಿದ್ದಾರೆ. 30 ಲಕ್ಷ ರೂಪಾಯಿ ಕೊಡಲು ಬೇಡಿಕೆ ಇಟ್ಟು ಬೆದರಿಕೆ ಹಾಕಿದ್ದಾರೆ.

ಈ ವೇಳೆ ಲಾರಿ ಚಾಲಕ ಶಫಿವುಲ್ಲಾ ಮಾಲೀಕರಿಗೆ ಮಾಹಿತಿ ನೀಡಿದ್ದು, ವಿಷಯ ತಿಳಿದ ಲಾರಿ ಮಾಲೀಕರು ಸ್ಥಳಕ್ಕೆ ಬರುತ್ತಿದ್ದಂತೆ ಆರೋಪಿಗಳು ಲಾರಿ ಚಾಲಕನ ಬಳಿ ಇದ್ದ 10 ಸಾವಿರ ರೂಪಾಯಿ ಪಡೆದು ಪರಾರಿಯಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಲಾರಿ ಚಾಲಕ ಶಫಿವುಲ್ಲಾ ಹೊಳೆಹೊನ್ನೂರು ಠಾಣೆ ಪೊಲೀಸರಿಗೆ ದೂರು ನೀಡಿದ್ದು, ಸುಲಿಗೆಗೆ ಯತ್ನಿಸಿದ ನವೀನ್ ಮತ್ತು ಸತೀಶ್ ಅವರನ್ನು ಬಂಧಿಸಲಾಗಿದೆ ಎಂದು ಸಿಪಿಐ ಆರ್.ಎಲ್. ಲಕ್ಷ್ಮಿಪತಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular