HomeKarnatakaBIG NEWS: ನಿಯಂತ್ರಣತಪ್ಪಿ ಹಳ್ಳಕ್ಕೆ ಬಿದ್ದ ಕಾರಿನಲ್ಲಿ ಬೆಂಕಿ: ಚಾಲಕ ಸಜೀವದಹನ

BIG NEWS: ನಿಯಂತ್ರಣತಪ್ಪಿ ಹಳ್ಳಕ್ಕೆ ಬಿದ್ದ ಕಾರಿನಲ್ಲಿ ಬೆಂಕಿ: ಚಾಲಕ ಸಜೀವದಹನ

ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣತಪ್ಪಿದ ಕಾರು ಹಳ್ಳಕ್ಕೆ ಬಿದ್ದು ಬೆಂಕಿ ಹೊತ್ತಿಕೊಂಡ ಪರಿಣಾಮ ಕಾರು ಚಾಲಕ ಸಜೀವವಾಗಿ ದಹನವಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗೊಲಪಲ್ಲಿ ಗ್ರಾಮದಲ್ಲಿ ನಡೆದಿದೆ.

ಇಬ್ರಾಹಿಂ (48) ಮೃತ ದುರ್ದೈವಿ. ವ್ಯಾಪಾರ ಮುಗಿಸಿಕೊಂಡು ಒಮಿನಿ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಕಾರು ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದೆ. ಬೆಂಕಿ ಹೊತ್ತಿಕೊಂಡ ಪರಿಣಾಮ ಕಾರಿನ ಸಮೇತ ಚಾಲಕ ಸುಟ್ಟು ಕರಕಲಾಗಿದ್ದಾರೆ.

ಮೃತದೇಹವನ್ನು ಚಿಂತಾಮಣಿ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular