HomeKarnatakaBIG NEWS: ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ, ಪ್ರತಿಭಟನೆಯಲ್ಲ: ಕೇಸರಿ ಪಡೆ ಕಾಲೆಳೆದ ಡಿಸಿಎಂ

BIG NEWS: ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ, ಪ್ರತಿಭಟನೆಯಲ್ಲ: ಕೇಸರಿ ಪಡೆ ಕಾಲೆಳೆದ ಡಿಸಿಎಂ

ಬೆಂಗಳೂರು: ರೈತರ ಭೂಮಿಗೆ ವಕ್ಫ್ ಆಸ್ತಿ ಎಂದು ರೈತರಿಗೆ ನೋಟಿಸ್ ನೀಡಿರುವ ವಿಚಾರವಾಗಿ ಈಗಾಗಲೇ ಸಿಎಂ ಸಿದ್ದರಾಮಯ್ಯ ರೈತರಿಗೆ ನೀಡಿರುವ ನೋಟಿಸ್ ಹಿಂಪಡೆಯಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಆದಾಗ್ಯೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಇಂದಿನಿಂದ ಪ್ರತಿಭಟನೆಗೆ ಸಜ್ಜಾಗಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಬಿಜೆಪಿ ನಾಯಕರಿಗೆ ಟಾಂಗ್ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ವಕ್ಫ್ ವಿಚಾರವಾಗಿ ಬಿಜೆಪಿ ನಾಯಕರು ಮಾಡುತ್ತಿರುವುದು. ರಾಜಕಾರಣ, ಪ್ರತಿಭಟನೆಯಲ್ಲ ಎಂದು ಕಾಲೆಳೆದಿದ್ದಾರೆ.

ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ ಹೊರತು ಪ್ರತಿಭಟನೆಯಲ್ಲ. ರೈತರ ಬಗ್ಗೆ ಬಿಜೆಪಿಯವರಿಗೆ ಯಾವುದೇ ಕಾಳಜಿ ಇಲ್ಲ. ಈಗಾಗಲೇ ನೋಟಿಸ್ ವಾಪಾಸ್ ಪಡೆಯಲು ಸೂಚಿಸಲಾಗಿದೆ. ಆದರೂ ಪ್ರತಿಭಟನೆ ನಡೆಸುತ್ತಿರುವುದು ರಾಜಕೀಯ ದುರುದ್ದೇಶ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ ಚೆನ್ನಪಟ್ಟನ ಉಪಚುನಾವಣೆ ವಿಚಾರವಾಗಿ ಮತದಾರರು ಕೆಲಸಕ್ಕೆ ತಕ್ಕ ಮಾರ್ಕ್ಸ್ ಕೊಡ್ತಾರೆ. ರಣರಂಗ ಆಡಿದವರೆಲ್ಲಾ ಮುಗಿದು ಹೋಗಿದ್ದಾರೆ. ಯಾವ ರಣನೂ ಇಲ್ಲ, ರಂಗನೂ ಇಲ್ಲ ಎಂದು ಹೇಳಿದರು.

 

For Latest News Updates, Join Our Whatsapp Community🚩
RELATED ARTICLES

Most Popular