HomeKarnatakaBIG NEWS: ಪತಿ ನಿಖಿಲ್ ಪರ ಚುನಾವಣಾ ಪ್ರಚಾರ ನಡೆಸಿದ ಪತ್ನಿ ರೇವತಿ

BIG NEWS: ಪತಿ ನಿಖಿಲ್ ಪರ ಚುನಾವಣಾ ಪ್ರಚಾರ ನಡೆಸಿದ ಪತ್ನಿ ರೇವತಿ

ರಾಮನಗರ: ಚನ್ನಪಟ್ಟಣ ಉಪಾಚುನಾವಣಾ ಅಖಾಡ ದಿನದಿಂದ ದಿನಕ್ಕೆರಂಗೇರುತ್ತಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್-ಬಿಜೆಪಿ ನಾಯಕರು ಅಭ್ಯರ್ಥಿಗಳ ಪರ ಅಬ್ಬರ ಪ್ರಚಾರ ನಡೆಸಿದ್ದಾರೆ. ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಪತ್ನಿ ರೇವತಿ ಚುನವಣಾ ಪ್ರಚಾರ ನಡೆಸಿದ್ದಾರೆ.

ಇಂದು ಚನ್ನಪಟ್ಟಣದಲ್ಲಿ ಒಂದೆಡೆ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಪರ ಡಿಸಿಎಂ ಡಿ.ಕೆ.ಶಿವಕುಮಾರ್ ಮತಯಾಚನೆ ನಡೆಸಿದ್ದರೆ ಮತ್ತೊಂದೆಡೆ ಎನ್ ಡಿಎ ಅಭ್ಯರ್ಥಿ ನಿಖಿಲ್ ಪರ ಕೇಂದ್ರ ಸಚಿವ ಕುಮಾರಸ್ವಾಮಿ ಮತ ಬೇಟೆ ನಡೆಸಿದ್ದಾರೆ. ಇದೇ ವೇಳೆ ಪತಿ ನಿಖಿಲ್ ಪರ ಪತ್ನಿ ರೇವತಿ ಕೂಡ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು ಮತಯಾಚಿಸಿದರು.

ಇಂದು ಬೆಳಿಇಗ್ಗೆಯಿಂದಲೇ ಚನ್ನಪಟ್ಟಣದ ವಿವಿಧೆಡೆ ರೇವತಿ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದು, ಚನ್ನಪಟ್ಟಣ ಮಹಿಳಾ ಕಾಲೇಜು ಮುಂಭಾಗ ವಿದ್ಯಾರ್ಥಿನಿಯರಿಗೆ ಕರಪತ್ರ ವಿತರಿಸಿ ನಿಖಿಲ್ ಗೆ ಮತ ನೀಡುವಂತೆ ಮನವಿ ಮಾಡಿದರು. ರೇವತಿಗೆ ಜೆಡಿಎಸ್ ಮಹಿಳಾ ಕಾರ್ಯಕರ್ತರು ಸಾಥ್ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular