HomeKarnatakaBREAKING NEWS: ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತ ಅಧಿಕಾರಿಗಳಿಂದ ನೋಟಿಸ್ ಜಾರಿ

BREAKING NEWS: ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತ ಅಧಿಕಾರಿಗಳಿಂದ ನೋಟಿಸ್ ಜಾರಿ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಮೈಸೂರು ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದು, ನವೆಂಬರ್ 6ರಂದು ಬೆಳಿಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.

ನ.6ರಂದು ಮೈಸೂರು ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ. ಈ ಮೂಲಕ 40 ವರ್ಷಗಳ ಸಿದ್ದರಾಮಯ್ಯ ಅವರ ರಾಜಕೀಯ ಜೀವನದಲ್ಲಿ ಮೊದಲ ಬಾರಿಗೆ ವಿಚಾರಣೆಗೆ ನೋಟಿಸ್ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಡಾ ಹಗರಣ ಸಂಬಂಧ ಈಗಾಗಲೇ ಎ2 ಆರೋಪಿ ಪಾರ್ವತಿ ಸಿದ್ದರಾಮಯ್ಯ, ಎ3 ಆರೋಪಿ ಮಲ್ಲಿಕಾರ್ಜುನಯ್ಯ ಹಾಗೂ ಎ4 ಆರೋಪಿ ಸೇರಿದಂತೆ ಹಲವರ ವಿಚಾರಣೆ ಮುಗಿದಿದ್ದು, ಎ1 ಆರೋಪಿ ಸಿಎಂ ಸಿದ್ದರಾಮಯ್ಯ ಅವರ ವಿಚಾರಣೆ ಮಾತ್ರ ಬಾಕಿಯಿದೆ. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular