HomeAutoHSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ಮತ್ತೆ ವಿಸ್ತರಣೆ: ಡಿ. 1 ರಿಂದ ದಂಡ ಪ್ರಯೋಗ

HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ಮತ್ತೆ ವಿಸ್ತರಣೆ: ಡಿ. 1 ರಿಂದ ದಂಡ ಪ್ರಯೋಗ

ಬೆಂಗಳೂರು: ರಾಜ್ಯದಲ್ಲಿ ವಾಹನಗಳಿಗೆ ಹೆಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಕೆಗೆ ನೀಡಲಾಗಿದ್ದ ಗಡುವು ಮತ್ತೆ ವಿಸ್ತರಣೆಯಾಗದೆ. ಈ ಮೂಲಕ ವಾಹನ ಸವಾರರಿಗೆ ಗುಡ್‌ನ್ಯೂಸ್‌ ಸಿಕ್ಕಂತಾಗಿದೆ.

ನವೆಂಬರ್ 30ರವರೆಗೆ HSRP ನಂಬರ್ ಪ್ಲೇಟ್ ಅಳವಡಿಕೆಗೆ ಸಮಯ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. HSRP ಅಳವಡಿಕೆ ಅವಧಿ ಮುಗಿದಿದ್ದರೂ ಸರ್ಕಾರದಿಂದ ಮೂರ್ನಾಲ್ಕು ಬಾರಿ ಕಾಲಾವಕಾಶ ನೀಡಲಾಗಿತ್ತು. ಹೀಗಿದ್ದರೂ ಅನೇಕರು ಇನ್ನು HSRP ನಂಬರ್ ಪ್ಲೇಟ್ ಅಳವಡಿಸಿಕೊಂಡಿಲ್ಲ. ಹೀಗಾಗಿ ಮತ್ತೊಂದು ಅವಕಾಶ ಕಲ್ಪಿಸಿ ಗಡುವು ವಿಸ್ತರಿಸಲಾಗಿದೆ.

ರಾಜ್ಯದಲ್ಲಿ 1.9 ಕೋಟಿ ಹಳೆ ವಾಹನಗಳ ಪೈಕಿ 55 ಲಕ್ಷ ವಾಹನಗಳಿಗೆ HSRP ಅಳವಡಿಸಲಾಗಿದೆ. ಇನ್ನೂ ಬಾಕಿ ವಾಹನಗಳ ಮಾಲೀಕರು HSRP ಅಳವಡಿಸಿಕೊಳ್ಳದ ಹಿನ್ನೆಲೆಯಲ್ಲಿ ನವೆಂಬರ್ 30ರವರೆಗೆ ಅವಕಾಶ ಕಲ್ಪಿಸಲಾಗಿದೆ. ಡಿಸೆಂಬರ್ 1ರಿಂದ ದಂಡ ಪ್ರಯೋಗಿಸಲು ಸಾರಿಗೆ ಇಲಾಖೆ ತೀರ್ಮಾನಿಸಿದೆ. ಹೀಗಾಗಿ 2019ಕ್ಕಿಂತ ಮೊದಲು ನೋಂದಣಿಯಾದ ವಾಹನಗಳಿಗೆ HSRP ನಂಬರ್ ಪೆಟ್ ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular