ಲೋಕಾಯುಕ್ತ ವಿಚಾರಣೆ ದಿನವೇ ಚನ್ನಪಟ್ಟಣದಲ್ಲಿ ಸಿಎಂ ಸಿದ್ಧರಾಮಯ್ಯ ಪ್ರಚಾರ

ಬೆಂಗಳೂರು: ಲೋಕಾಯುಕ್ತ ವಿಚಾರಣೆಯ ದಿನವೇ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಕೈಗೊಂಡಿದ್ದಾರೆ.

ಉಪ ಚುನಾವಣೆ ಹಿನ್ನೆಲೆಯಲ್ಲಿ ನವೆಂಬರ್ 6ರಂದು ಚನ್ನಪಟ್ಟಣದಲ್ಲಿ ಮುಖ್ಯಮಂತ್ರಿಗಳ ಪ್ರಚಾರ ಪ್ರವಾಸ ಪಟ್ಟಿ ಬಿಡುಗಡೆ ಮಾಡಲಾಗಿದೆ. ಬೆಳಗ್ಗೆ 11 ಗಂಟೆಗೆ ಚಿಕ್ಕೇನಹಳ್ಳಿಗೆ ಆಗಮಿಸಲಿರುವ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಪರವಾಗಿ ಮತಯಾಚನೆ ಮಾಡಲಿದ್ದಾರೆ.

ಮಧ್ಯಾಹ್ನ 12.05ಕ್ಕೆ ಕುಂಬಾರಕಟ್ಟೆ ವೃತ್ತದಲ್ಲಿ ಸಿಎಂ ಪ್ರಚಾರ ಸಭೆ ನಡೆಯಲಿದೆ. ಮಧ್ಯಾಹ್ನ 1:30 ಕ್ಕೆ ಕೂಡ್ಲೂರು ಗ್ರಾಮದಲ್ಲಿ ಪ್ರಚಾರ ಸಭೆ ನಡೆಯಲಿದ್ದು, ಮಧ್ಯಾಹ್ನ 2:30 ರಿಂದ 4:30ರ ವರೆಗೆ ಕಾರ್ಯಕ್ರಮ ನಿಗದಿಯಾಗಿಲ್ಲ. ಸಂಜೆ ಐದು ಗಂಟೆಗೆ ಸೋಗಲ ಗ್ರಾಮದಲ್ಲಿ ಸಿಎಂ ಪ್ರಚಾರ ನಡೆಸಲಿದ್ದಾರೆ.

6.15ಕ್ಕೆ ಕೋಡಂಬಳ್ಳಿಯಲ್ಲಿ ಪ್ರಚಾರ ಸಭೆ ನಿಗದಿಯಾಗಿದೆ. ರಾತ್ರಿಯ 7.30ಕ್ಕೆ ಹೊಂಗನೂರು ಗ್ರಾಮದಲ್ಲಿ ಸಿಎಂ ಮತಯಾಚನೆ ಮಾಡಲಿದ್ದಾರೆ. 8.45ಕ್ಕೆ ಚನ್ನಪಟ್ಟಣದ ಕನಕ ನಗರದಲ್ಲಿ ರೋಡ್ ಶೋ ನಡೆಯಲಿದೆ. ನಂತರ ರಸ್ತೆ ಮೂಲಕ ಸಿಎಂ ಬೆಂಗಳೂರಿಗೆ ಹಿಂತಿರುಗಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read