alex Certify ‘ಮಿಷನ್ ಶಕ್ತಿ ಯೋಜನೆ’ಯಡಿ ವಿವಿಧ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ಅರ್ಜಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಮಿಷನ್ ಶಕ್ತಿ ಯೋಜನೆ’ಯಡಿ ವಿವಿಧ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ಅರ್ಜಿ

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಿಷನ್ ಶಕ್ತಿ ಯೋಜನೆಯಡಿಯಲ್ಲಿ  ಹಣಕಾಸು ಸಾಕ್ಷರತೆ ಮತ್ತು ಅಕೌಂಟೆಟ್ ನಲ್ಲಿ ತಜ್ಞರು, ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಸಹಾಯಕ ಜಿಲ್ಲಾ ಸಂಯೋಜನಕರ ಹುದ್ದೆಗೆಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ:

ಹಣಕಾಸು ಸಾಕ್ಷರತೆ ಮತ್ತು ಅಕೌಂಟೆಟ್ ನಲ್ಲಿ ತಜ್ಞರ ಹುದ್ದೆಗೆ ಅರ್ಥಶಾಸ್ತ್ರ, ಬ್ಯಾಂಕಿಂಗ್, ಇತರೆ ವಿಭಾಗಗಳಲ್ಲಿ ಪದವೀಧರರು, ಸ್ನಾತಕೋತ್ತರ ಪದವಿ ಹೊಂದಿದವರಿಗೆ ಅದ್ಯತೆ. ಸರ್ಕಾರಿ / ಸ್ವಯಂ ಸೇವಾ ಸಂಸ್ಥೆಗಳಲ್ಲಿ ಕನಿಷ್ಠ 3 ವರ್ಷಗಳ ಅನುಭವ ಹೊಂದಿರಬೇಕು. ಕಂಪ್ಯೂಟರ್ ಬಳಕೆಯಲ್ಲಿ, ಕನ್ನಡ / ಇಂಗ್ಲೀಷ್ ಬೆರಳಚ್ಚು, ಗೂಗಲ್ ಶೀಟ್ ಎಂ.ಎಸ್. ಆಫೀಸ್ ಹಾಗೂ ಪಿ.ಪಿ.ಟಿ.ಯಲ್ಲಿ ಪ್ರಾವೀಣ್ಯತೆ ಹೊಂದಿರಬೇಕು.

ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಸಹಾಯಕ ಜಿಲ್ಲಾ ಸಂಯೋಜನಕರ ಹುದ್ದೆಗೆ ಕಂಪ್ಯೂಟರ್/ಐಟಿ ಇತ್ಯಾದಿಗಳಲ್ಲಿ ಕೆಲಸ ಮಾಡುವ ಜ್ಞಾನದೊಂದಿಗೆ ಪದವಿ ಹೊಂದಿರಬೇಕು. ಸರ್ಕಾರಿ / ಸ್ವಯಂ ಸೇವಾ ಸಂಸ್ಥೆಗಳಲ್ಲಿ ಕನಿಷ್ಠ 3 ವರ್ಷಗಳ ಅನುಭವ ಹೊಂದಿರಬೇಕು. ಕಂಪ್ಯೂಟರ್ ಬಳಕೆಯಲ್ಲಿ, ಕನ್ನಡ / ಇಂಗ್ಲೀಷ್ ಬೆರಳಚ್ಚು, ಗೂಗಲ್ ಶೀಟ್ ಎಂ.ಎಸ್. ಆಫೀಸ್ ಹಾಗೂ ಪಿ.ಪಿ.ಟಿ ಯಲ್ಲಿ ಪ್ರಾವೀಣ್ಯತೆ ಹೊಂದಿರಬೇಕು.

ಆಸಕ್ತ ಅಭ್ಯರ್ಥಿಗಳು ಉಪ ನಿರ್ದೇಶಕರವರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ಸುಧಾರಣಾ ಸಂಸ್ಥೆಗಳ ಸಂಕೀರ್ಣ, ಡಾ.ಎಂ.ಹೆಚ್. ಮರಿಗೌಡ ರಸ್ತೆ, ಬೆಂಗಳೂರು -560029 ಇಲ್ಲಿಗೆ ತಮ್ಮ ವ್ಯಕ್ತಿಗತ ವಿವರ (Resume) ವನ್ನು ಎಲ್ಲಾ ದಾಖಲೆಗಳೊಂದಿಗೆ ನವೆಂಬರ್ 23 ರೊಳಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-26578688 ಗೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...