HomeAutoಹಳೆ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸಲು ನ. 30 ರವರೆಗೆ ಗಡುವು ವಿಸ್ತರಣೆ

ಹಳೆ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸಲು ನ. 30 ರವರೆಗೆ ಗಡುವು ವಿಸ್ತರಣೆ

ಬೆಂಗಳೂರು: ಹಳೆ ವಾಹನಗಳಿಗೆ ಹೈ ಸೆಕ್ಯೂರಿಟಿ ನೋಂದಣಿ ಫಲಕ ಹೆಚ್ಎಸ್ಆರ್ಪಿಗಳ ಅಳವಡಿಕೆ ಗಡುವನ್ನು ನವೆಂಬರ್ 30ರವರೆಗೆ ವಿಸ್ತರಿಸಲಾಗಿದೆ. 2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಣಿಯಾದ ವಾಹನಗಳಿಗೆ HSRP ಅಳವಡಿಕೆ ಕಡ್ಡಾಯ ಮಾಡಲಾಗಿದೆ.

ಹೆಚ್ಎಸ್ಆರ್ಪಿ ಅಳವಡಿಕೆಯನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿದ್ದು, ಅದರಂತೆ ರಾಜ್ಯದಲ್ಲಿ 2 ಕೋಟಿ ವಾಹನಗಳು ಹೆಚ್ಎಸ್ಆರ್ಪಿ ಅಳವಡಿಸಿಕೊಳ್ಳಬೇಕಿದೆ. ಇದುವರೆಗೆ 50 ಲಕ್ಷಕ್ಕೂ ಅಧಿಕ ವಾಹನಗಳು ಮಾತ್ರ ಹೆಚ್ಎಸ್ಆರ್ಪಿ ಅಳವಡಿಸಿಕೊಂಡಿದ್ದು, 1.50 ಕೋಟಿ ವಾಹನಗಳು ಹೆಚ್ಎಸ್ಆರ್ಪಿ ಅಳವಡಿಸಿಕೊಳ್ಳಬೇಕಿದೆ.

ಈಗಾಗಲೇ 4 ಬಾರಿ ಸಾರಿಗೆ ಇಲಾಖೆ ಗಡುವು ವಿಸ್ತರಿಸಿದ್ದು, ಮತ್ತೊಮ್ಮೆ ನವೆಂಬರ್ 30ರವರೆಗೆ ಹೊಸ ಗಡುವು ನಿಗದಿ ಮಾಡಲಾಗಿದೆ. ನಂತರ ದಂಡ ಪ್ರಯೋಗಿಸಲಾಗುವುದು ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular