ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ(ಮುಡಾ) ನಿವೇಶನ ಹಂಚಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಆದೇಶಿಸಬೇಕು ಎಂದು ಮೈಸೂರಿನ ಸ್ನೇಹಮಯಿ ಕೃಷ್ಣ ಸಲ್ಲಿಸಿದ ಅರ್ಜಿ ಮಂಗಳವಾರ ಹೈಕೋರ್ಟ್ ಮುಂದೆ ವಿಚಾರಣೆಗೆ ಬರಲಿದೆ.
ಸ್ನೇಹಮಯಿ ಕೃಷ್ಣ ಅವರ ತಕರಾರು ಅರ್ಜಿ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠದ ಮುಂದೆ ವಿಚಾರಣೆಗೆ ನಿಗದಿಯಾಗಿದ್ದು, ರಾಜ್ಯ ಗೃಹ ಸಚಿವಾಲಯ, ಗೃಹ ಇಲಾಖೆ, ಮೈಸೂರು ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರು, ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಸೇರಿದಂತೆ ಒಟ್ಟು 12 ಮಂದಿ ಅರ್ಜಿಯಲ್ಲಿ ಪ್ರತಿವಾದಿಗಳಾಗಿದ್ದಾರೆ.
ಮುಡಾ ಪ್ರಕರಣ ಪೊಲೀಸ್ ತನಿಖೆಗೆ ಅನುಮತಿಸಿ ಇದೇ ನ್ಯಾಯ ಪೀಠ 2024ರ ಸೆಪ್ಟೆಂಬರ್ 24ರಂದು ಆದೇಶಿಸಿತ್ತು. ಈ ತಕರಾರು ಅರ್ಜಿಯ ವಿಚಾರಣೆ ಸಹ ಕುತೂಹಲ ಮೂಡಿಸಿದೆ.