Video | ಯುವಕರ ಗುಂಪಿನ ನಡುವೆ ಘರ್ಷಣೆ; ದೇವಾಲಯದ ಮೇಲೆ ಕಲ್ಲು ತೂರಾಟ

ರಾಷ್ಟ್ರ ರಾಜಧಾನಿ ನವದೆಹಲಿಯ ಜಹಾಂಗೀರ್‌ಪುರಿ ಪ್ರದೇಶದಲ್ಲಿನ ದೇವಸ್ಥಾನವೊಂದರಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಕಲ್ಲು ತೂರಾಟ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಕೆಲವರು ಇದನ್ನು ಕೋಮು ಗಲಭೆಗೆ ತಿರುಗಿಸಲು ಯತ್ನಿಸಿದ್ದು, ಪೊಲೀಸರ ಸಕಾಲಿಕ ಕ್ರಮದಿಂದ ವಿಫಲವಾಗಿದೆ.

ಪೊಲೀಸರ ಪ್ರಕಾರ, ಘಟನೆಯಲ್ಲಿ ಇಬ್ಬರು ಅಪ್ರಾಪ್ತ ಬಾಲಕರಿಗೆ ಗಾಯಗಳಾಗಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ. ಅವರ ಸ್ಥಿತಿ ಸಾಮಾನ್ಯವಾಗಿದೆ ಎಂದು ಹೇಳಲಾಗಿದೆ.

ಕಲ್ಲು ತೂರಾಟದ ಘಟನೆಯ ಸಿಸಿ ಟಿವಿ ದೃಶ್ಯಾವಳಿ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವೈರಲ್ ಆಗಿದ್ದು, ಇದರಲ್ಲಿ ಕೆಲವು ಹುಡುಗರು ದೇವಸ್ಥಾನದಲ್ಲಿ ಪರಸ್ಪರ ಕಲ್ಲುಗಳನ್ನು ಎಸೆಯುವುದನ್ನು ಕಾಣಬಹುದು.

ಸೋಮವಾರ ರಾತ್ರಿ 8.15ರ ಸುಮಾರಿಗೆ ಘಟನೆ ನಡೆದಿದ್ದು, ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“ದೇವಸ್ಥಾನದ ಮೇಲೆ ಕಲ್ಲು ತೂರಾಟದ ಘಟನೆಯ ಕುರಿತು ನಮಗೆ ಅನೇಕ ಪಿಸಿಆರ್ ಕರೆಗಳು ಬಂದವು. ಮಹೀಂದ್ರಾ ಪಾರ್ಕ್ ಪೊಲೀಸ್ ಠಾಣೆಯ ತಂಡ ತಕ್ಷಣವೇ ಸ್ಥಳಕ್ಕೆ ಧಾವಿಸಿದೆ ಮತ್ತು ಪ್ರಾಥಮಿಕ ತನಿಖೆಯು ಒಂದೇ ಸಮುದಾಯದ ಎರಡು ಗುಂಪುಗಳ ನಡುವೆ ನಡೆದಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಎರಡೂ ಗುಂಪುಗಳ ನಡುವೆ ಜಗಳ ನಡೆದಿದ್ದು, ಈ ಹಿಂದೆ ಮೂವರು ಬಾಲಾಪರಾಧಿಗಳ ವಿರುದ್ಧವೂ ಪ್ರಕರಣ ದಾಖಲಾಗಿತ್ತು ಎಂದು ಅಧಿಕಾರಿ ತಿಳಿಸಿದ್ದಾರೆ.

“ಆರೋಪಿಗಳನ್ನು ಬಂಧಿಸಲು ತಂಡಗಳನ್ನು ರಚಿಸಲಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ಕೆಲವರು ಕೋಮು ಸೌಹಾರ್ದತೆ ಕದಡಲು ಇಡೀ ವಿಷಯವನ್ನು ತಪ್ಪಾಗಿ ಬಿಂಬಿಸಿದ್ದಾರೆ. ಇಡೀ ಘಟನೆಯ ಬಗ್ಗೆ ತಪ್ಪು ಮಾಹಿತಿ ಹರಡುತ್ತಿರುವ ಕೆಲವು ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳನ್ನು ನಮ್ಮ ಸೈಬರ್ ತಂಡ ಗುರುತಿಸಿದೆ. ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಉಪ ಪೊಲೀಸ್ ಆಯುಕ್ತ (ವಾಯುವ್ಯ) ಅಭಿಷೇಕ್ ಧನಿಯಾ ಸಂದೇಶದಲ್ಲಿ ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read