ಬೆಂಗಳೂರು : ನ.9 ರಿಂದ ರಾಜ್ಯದ 19 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೇರಳದ ದಕ್ಷಿಣ ಕರಾವಳಿ ಹಾಗೂ ಶ್ರೀಲಂಕಾದಿಂದ ದೂರದಲ್ಲಿ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಸೃಷ್ಟಿಯಾದ ಹಿನ್ನೆಲೆ ಕರ್ನಾಟಕದಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಚಿತ್ರದುರ್ಗ, ದಾವಣಗೆರೆ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ವಿಜಯನಗರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಸೇರಿದಂತೆ 19 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರಿ ಮಳೆಯಿಂದ ಮಲೆನಾಡಿನ ಜನರು ತತ್ತರಗೊಂಡಿದ್ದಾರೆ. ಅಡಿಕೆ, ಕಾಫಿ ಮಳೆಗೆ ಉದುರುತ್ತಿದ್ದು, ಕೊಯ್ಲು ಮಾಡಿದ ಅಡಿಕೆ ಸಂಸ್ಕರಿಸಲು ಆಗದೇ ಮಲೆನಾಡಿನ ರೈತರು ಪರದಾಡುತ್ತಿದ್ದಾರೆ. ಈಗಾಗಲೇ ಭಾರಿ ಮಳೆಯಿಂದ ಅಡಿಕೆ ಕೊಳೆ ರೋಗಕ್ಕೆ ತುತ್ತಾಗಿದ್ದು, ರೈತರು ಸಂಕಷ್ಟದಲ್ಲಿದ್ದಾರೆ.