HomeKarnatakaBIG NEWS: ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ: ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ 5 ಲಕ್ಷ ಮೌಲ್ಯದ ಗಾಂಜಾ...

BIG NEWS: ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ: ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ 5 ಲಕ್ಷ ಮೌಲ್ಯದ ಗಾಂಜಾ ಸೀಜ್

ಚಿತ್ರದುರ್ಗ: ಚಳ್ಳಕೆರೆ ಪಟ್ಟಣದಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದು, ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ 5 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ ಪಡೆದಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದ ಸೂಜಿಮಲ್ಲೇಶ್ ಬಡಾವಣೆಯ ಮನೆಯಲ್ಲಿ ಗಾಂಜಾ ಸಂಗ್ರಹಿಸಿಡಲಾಗಿತ್ತು ಎಂಬ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ 5 ಲಕ್ಷ ಮೌಲ್ಯದ 13 ಕೆಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ.

ದಾಳಿ ವೇಳೆ ಮನೆಯಲ್ಲಿ ಗಾಂಜಾ ಸಂಗ್ರಹಿಸಿಟ್ಟಿದ್ದ ಆರೋಪಿ ಮೆಹಬೂಬ್ ನಾಪತ್ತೆಯಾಗಿದ್ದಾನೆ. ಅಬಕಾರಿ ಇಲಾಖೆ ನಿರೀಕ್ಷಕಿ ವನಿತಾ ನೇತೃತ್ವದಲ್ಲಿ ದಾಳಿ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular