HomeKarnatakaBREAKING NEWS: ಮೈಸೂರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ: ಕೆಲವೇ ಕ್ಷಣಗಳಲ್ಲಿ ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರು

BREAKING NEWS: ಮೈಸೂರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ: ಕೆಲವೇ ಕ್ಷಣಗಳಲ್ಲಿ ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರು

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಲಿದ್ದಾರೆ.

ಮುಡಾ ಹಗರಣದಲ್ಲಿ ಎ1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಇಂದು ಬೆಳಿಗ್ಗೆ 10 ಗಂಟೆಗೆ ಮೈಸೂರು ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು.

ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಮೈಸೂರಿಗೆ ಆಗಮಿಸಿದ್ದಾರೆ. ಬೆಂಗಳೂರಿನಿಂದ ಖಾಸಗಿ ಕಾರಿನಲ್ಲಿ ಮೈಸೂರಿಗೆ ಆಗಮಿಸಿರುವ ಸಿಎಂ ಸಿದ್ದರಾಮಯ್ಯ ಕೆಲವೇ ಕ್ಷಣಗಳಲ್ಲಿ ಮೈಸೂರು ಲೋಕಾಯುಕ್ತ ಕಚೇರಿಗೆ ತೆರಳಲಿದ್ದು, ವಿಚಾರಣೆಗೆ ಹಾಜರಾಗಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular