ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಲೋಕಾಯುಕ್ತ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ವಿಚಾರಣೆಗೆ ಹಾಜರಾಗಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ಮೈಸೂರು ಲೋಕಾಯುಕ್ತ ಕಚೇರಿಗೆ ಆಗಮಿಸಿ ವಿಚಾರಣೆಗೆ ಹಾಜರಾಗಿದ್ದಾರೆ. ಲೋಕಾಯುಕ್ತ ಎಸ್ ಪಿ ಉದೇಶ್ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಿಚಾರಣೆ ನಡೆಯಲಿದೆ.
ಮುಡಾ ಹಗರಣದಲ್ಲಿ ಎ1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಇಂದು ಬೆಳಿಗ್ಗೆ 10 ಗಂಟೆಗೆ ಮೈಸೂರು ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು.
ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಮೈಸೂರಿಗೆ ಆಗಮಿಸಿದ್ದಾರೆ. ಬೆಂಗಳೂರಿನಿಂದ ಖಾಸಗಿ ಕಾರಿನಲ್ಲಿ ಮೈಸೂರಿಗೆ ಆಗಮಿಸಿರುವ ಸಿಎಂ ಸಿದ್ದರಾಮಯ್ಯ ಮೈಸೂರು ಲೋಕಾಯುಕ್ತ ಕಚೇರಿಗೆ ತೆರಳಿದ್ದು ,ವಿಚಾರಣೆಗೆ ಹಾಜರಾಗಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಕೂಡ ವಿಚಾರಣೆ ಆರಂಭಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.