HomeKarnatakaBREAKING : ಮೈಸೂರಿನಲ್ಲಿ 'CM ಸಿದ್ದರಾಮಯ್ಯ' ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ : ಹಲವು 'BJP' ಕಾರ್ಯಕರ್ತರು...

BREAKING : ಮೈಸೂರಿನಲ್ಲಿ ‘CM ಸಿದ್ದರಾಮಯ್ಯ’ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ : ಹಲವು ‘BJP’ ಕಾರ್ಯಕರ್ತರು ಪೊಲೀಸ್ ವಶಕ್ಕೆ.!

ಬೆಂಗಳೂರು : ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ವಿರುದ್ಧ ಹಲವು ಬಿಜೆಪಿ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದ್ದು, ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಹೌದು, ಒಂದು ಕಡೆ ಸಿಎಂ ಸಿದ್ದರಾಮಯ್ಯ ಅವರು ಲೋಕಾಯಕ್ತ ವಿಚಾರಣೆಗೆ ಹಾಜರಾಗಿದ್ರೆ, ಇನ್ನೊಂದು ಕಡೆ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ತಳ್ಳಾಟ , ನೂಕಾಟ ನಡೆದಿದ್ದು, ಹಲವು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಪ್ರತಿಭಟನಾಕಾರರ ವಾಹನ ಸೀಜ್ ಮಾಡಿದ ಪೊಲೀಸರು ವಾಹನದ ಸಮೇತ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದುಕೊಂಡಿದ್ದಾರೆ . ಈ ವೇಳೆ ಪೊಲೀಸರ ನಡುವೆ ಮಾತಿನ ಚಕಮಕಿ ಕೂಡ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿಎಂ ಸಿದ್ದರಾಮಯ್ಯರು ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು, ಸಿಎಂ ಆಗಿ ತನಿಖೆ ಎದುರಿಸುವುದು ರಾಜ್ಯಕ್ಕೆ ಅವಮಾನ. ಈ ಕೂಡಲೇ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular