ಶಿವಮೊಗ್ಗ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಗಂಭೀರ ಆರೋಪವಿದೆ. ಇಂದು ಲೋಕಾಯುಕ್ತ ವಿಚಾರಣೆ ನಡೆಯುತ್ತಿದೆ. ಈಗಲಾದರೂ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ತನಿಖೆ ಎದುರಿಸಬೇಕು ಎಂದು ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಆಗ್ರಹಿಸಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿ.ವೈ.ರಾಘವೇಂದ್ರ, ಸಿಎಂ ಪತ್ನಿ ಪಾರ್ವತಿ ಅವರಿಗೆ ಹಂಚಿಕೆಯಾಗಿರುವ ಮುಡಾ ಸೈಟ್ ನಲ್ಲಿ ಅಕ್ರಮವಾಗಿದೆ ಎಂಬ ಗಂಭೀರ ಆರೋಪವಿದೆ. ಸಿದ್ದರಾಮಯ್ಯ ಪ್ರಮುಖ ಆರೋಪ ಎದುರಿಸುತ್ತಿದ್ದಾರೆ. ಆರಂಭದಲ್ಲೇ ನಾವು ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿದ್ದೆವು. ಆದರೂ ರಾಜೀನಾಮೆ ಕೊಟ್ಟಿಲ್ಲ. ಲೋಕಾಯುಕ್ತ ತನಿಖೆಗೆ ಕೋರ್ಟ್ ಆದೇಶ ನೀಡಿ ತನಿಖೆ ಆರಂಭವಾಗಿದೆ. ಇಂದು ಲೋಕಾಯುಕ್ತ ವಿಚಾರಣೆಗೆ ಸಿಎಂ ಹಾಜರಾಗಿದ್ದಾರೆ. ಈ ಹಂತದಲ್ಲಾದರೂ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು. ಆ ಬಳಿಕ ಬೇಖಾದರೆ ಮತ್ತೆ ಸಿಎಂ ಕುರ್ಚಿಗೆ ಬಂದು ಕೂರಲಿ ಎಂದರು.
ತನಿಖೆ ಸ್ಪಷ್ಟತೆಯಿಂದ ಕೂಡಿರಬೇಕು. ನಿಸ್ಪಕ್ಷಪಾತ ತನಿಖೆಯಾಗಬೇಕು ಎಂದರೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ತನಿಖೆಗೆ ಸಹಕರಿಸಬೇಕು ಎಂದು ಆಗ್ರಹಿಸಿದ್ದಾರೆ.