alex Certify BIG NEWS : ವಿಚಾರಣೆಗೂ ಮುನ್ನ ಲೋಕಾಯುಕ್ತ ಅಧಿಕಾರಿಗಳಿಗೆ ‘ಆಧಾರ್ ಕಾರ್ಡ್’ ತೋರಿಸಿದ CM ಸಿದ್ದರಾಮಯ್ಯ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ವಿಚಾರಣೆಗೂ ಮುನ್ನ ಲೋಕಾಯುಕ್ತ ಅಧಿಕಾರಿಗಳಿಗೆ ‘ಆಧಾರ್ ಕಾರ್ಡ್’ ತೋರಿಸಿದ CM ಸಿದ್ದರಾಮಯ್ಯ.!

ಬೆಂಗಳೂರು : ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದಾರೆ. ಲೋಕಾಯುಕ್ತ ವಿಚಾರಣೆಗೆ ಮುನ್ನ ಆಧಾರ್ ಕಾರ್ಡ್ ತೋರಿಸಿದ್ದು, ಬಳಿಕ ತನಿಖಾಧಿಕಾರಿಗಳು ವಿಚಾರಣೆ ಆರಂಭಿಸಿದ್ದಾರೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ. ಲೋಕಾಯುಕ್ತ ವಿಚಾರಣೆಗೆ ಮುನ್ನ ಸಿಎಂ ತಮ್ಮ ಆಧಾರ್ ಕಾರ್ಡ್ ಪ್ರದರ್ಶಿಸಿದ್ದಾರೆ .

ಮುಡಾ ಹಗರಣದಲ್ಲಿ ಎ1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ಇಂದು ಬೆಳಿಗ್ಗೆ 10 ಗಂಟೆಗೆ ಮೈಸೂರು ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಲೋಕಾಯುಕ್ತ ಎಸ್ ಪಿ ಉದೇಶ್ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಿಚಾರಣೆ ಆರಂಭವಾಗಿದೆ.

ಬೆಂಗಳೂರಿನಿಂದ ಖಾಸಗಿ ಕಾರಿನಲ್ಲಿ ಮೈಸೂರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಬೆಳಿಗ್ಗೆ 10 ಗಂಟೆಗೆ ಮೈಸೂರು ಲೋಕಾಯುಕ್ತ ಕಚೇರಿಗೆ ಆಗಮಿಸಿ ವಿಚಾರಣೆಗೆ ಹಾಜರಾಗಿದ್ದಾರೆ. ಲೋಕಾಯುಕ್ತದಿಂದ ಸಿಎಂ ವಿಚಾರಣೆ ಹಿನ್ನೆಲೆಯಲ್ಲಿ ಪೊಲೀಸ್ ಭಿಗಿ ಭದ್ರತೆ ಕೈಗೊಳ್ಳಲಾಗಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...