alex Certify BREAKING : ಮತ್ತೆ ‘ಲೋಕಾಯುಕ್ತ’ ವಿಚಾರಣೆಗೆ ಬರಲು ಹೇಳಿಲ್ಲ : CM ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮತ್ತೆ ‘ಲೋಕಾಯುಕ್ತ’ ವಿಚಾರಣೆಗೆ ಬರಲು ಹೇಳಿಲ್ಲ : CM ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್.!

ಬೆಂಗಳೂರು : ನಾನು ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದೇನೆ, ಮತ್ತೆ ವಿಚಾರಣೆಗೆ ಬರಲು ಹೇಳಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಲೋಕಾಯುಕ್ತ ವಿಚಾರಣೆ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ‘’ಹೌದು ನಾನು ಲೋಕಾಯುಕ್ತ ವಿಚಾರಣೆ ಎದುರಿಸಿದೆ. ಪ್ರಶ್ನೆಗಳನ್ನು ಕೇಳಿದ್ದಾರೆ. ಅದಕ್ಕೆ ಉತ್ತರ ಕೂಡ ನೀಡಿದ್ದೇನೆ ಎಂದರು. ಲೋಕಾಯುಕ್ತ ಅಧಿಕಾರಿಗಳು ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಉತ್ತರ ನೀಡಿದ್ದೇನೆ ಎಂದರು.

ಬಿಜೆಪಿಯವರು ಒಂದಾದರೂ ಪ್ರಕರಣವನ್ನು ಸಿಬಿಐಗೆ ಕೊಟ್ಟಿದ್ದಾರಾ..? ಎಂದು ಬಿಜೆಪಿಯವರ ಆರೋಪಗಳಿಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದರು. ಬಿಜೆಪಿಯವರು ಬರೀ ಸುಳ್ಳು ಆರೋಪಗಳನ್ನ ಮಾಡುತ್ತಿದ್ದಾರೆ. ಬಿಜೆಪಿಯವರಿಗೆ ಕಾನೂನಿನ ಬಗ್ಗೆ ಗೌರವ ಇಲ್ಲ, ಸಿಬಿಐ ಯಾರ ಕೈಯಲ್ಲಿದೆ ಎಂದು ಪ್ರಶ್ನಿಸಿದರು.

 

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...