alex Certify ಮೆಡಿಕಲ್ ಓದುವ ಎಸ್ಸಿ ವಿದ್ಯಾರ್ಥಿಗಳಿಗೆ 50 ಲಕ್ಷ ರೂ. ಪ್ರೋತ್ಸಾಹ ಧನ: ಸಮಾಜ ಕಲ್ಯಾಣ ಇಲಾಖೆ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೆಡಿಕಲ್ ಓದುವ ಎಸ್ಸಿ ವಿದ್ಯಾರ್ಥಿಗಳಿಗೆ 50 ಲಕ್ಷ ರೂ. ಪ್ರೋತ್ಸಾಹ ಧನ: ಸಮಾಜ ಕಲ್ಯಾಣ ಇಲಾಖೆ ಆದೇಶ

ಬೆಂಗಳೂರು: ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ಆಡಳಿತ ಮಂಡಳಿ ಕೋಟಾದಡಿ ಎಂಬಿಬಿಎಸ್ ಓದುವ ಪರಿಶಿಷ್ಟ ಜಾತಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ 50 ಲಕ್ಷ ರೂ.ವರೆಗೆ ಪ್ರೋತ್ಸಾಹಧನ ಮಂಜೂರು ಮಾಡಲು ಸಮಾಜ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.

ಪಿಯುಸಿಯಲ್ಲಿ ಶೇಕಡ 95 ರಷ್ಟು ಮತ್ತು ಅದಕ್ಕಿಂತ ಹೆಚ್ಚಿನ ಅಂಕ ಪಡೆದು ನೀಟ್ ಮೂಲಕ ಸರ್ಕಾರಿ ಕೋಟಾದಡಿ ಪ್ರವೇಶ ಲಭ್ಯವಾಗದಿದ್ದಾಗ ಆಡಳಿತ ಮಂಡಳಿ ಕೋಟಾದಡಿ ಎಂಬಿಬಿಎಸ್‌ ಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳ ಮೊದಲನೇ ವರ್ಷದ ಕಾಲೇಜು ಶುಲ್ಕ 25 ಲಕ್ಷ ರೂಪಾಯಿ ಪಾವತಿಸಲು ಪ್ರೋತ್ಸಾಹ ಧನ ಮಂಜೂರು ಮಾಡಲಾಗುವುದು.

ಅದೇ ವಿದ್ಯಾರ್ಥಿಯು ಮೊದಲನೇ ವರ್ಷದ ಪರೀಕ್ಷೆಯಲ್ಲಿ ಕನಿಷ್ಠ ಶೇಕಡ 60ರಷ್ಟು ಅಂಕಗಳನ್ನು ಪಡೆದು ತೇರ್ಗಡೆಯಾದಲ್ಲಿ ಪುನಃ 25 ಲಕ್ಷ ಪ್ರೋತ್ಸಾಹಧನ ಮಂಜೂರು ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಆದೇಶ ಪ್ರಕಟಿಸಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...