HomeEntertainmentನಟ ದರ್ಶನ್ ಆರೋಗ್ಯ ಸ್ಥಿತಿ ವರದಿ ಹೈಕೋರ್ಟ್ ಗೆ ಸಲ್ಲಿಕೆ

ನಟ ದರ್ಶನ್ ಆರೋಗ್ಯ ಸ್ಥಿತಿ ವರದಿ ಹೈಕೋರ್ಟ್ ಗೆ ಸಲ್ಲಿಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ನಟ ದರ್ಶನ್ ಆರೋಗ್ಯಕ್ಕೆ ಸಂಬಂಧಿಸಿದ ವೈದ್ಯಕೀಯ ವರದಿಯನ್ನು ಅವರ ಪರ ವಕೀಲರು ಹೈಕೋರ್ಟ್ ಗೆ ಸಲ್ಲಿಸಿದ್ದಾರೆ.

ಹೈಕೋರ್ಟ್ ನಿರ್ದೇಶನದ ಅನುಸಾರ ಅನಾರೋಗ್ಯದ ಕಾರಣ ದರ್ಶನ್ ಅವರಿಗೆ ಮಧ್ಯಂತರ ಜಾಮೀನು ನೀಡಲಾಗಿದೆ. ಯಾವಾಗ ಶಸ್ತ್ರಚಿಕಿತ್ಸೆ, ಎಷ್ಟು ದಿನ ಆಸ್ಪತ್ರೆಯಲ್ಲಿ ಇರಬೇಕಾಗುತ್ತದೆ ಇತರೆ ವಿವರ ಒಳಗೊಂಡ ವರದಿಯನ್ನು ಒಂದು ವಾರದಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಮಧ್ಯಂತರ ಜಾಮೀನು ನೀಡಿದ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಏಕ ಸದಸ್ಯ ಪೀಠ ಷರತ್ತು ವಿಧಿಸಿತ್ತು.

ವೈದ್ಯಕೀಯ ಚಿಕಿತ್ಸೆ ಪಡೆಯಲು 6 ವಾರ ಮಧ್ಯಂತರ ಜಾಮೀನು ಪಡೆದು ಜೈಲಿನಿಂದ ಹೊರಬಂದ ದರ್ಶನ್ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಅವರ ಆಪರೇಷನ್ ಬಗ್ಗೆ ಇನ್ನು ನಿರ್ಧಾರ ಕೈಗೊಂಡಿಲ್ಲ. ಫಿಸಿಯೋಥೆರಪಿ ನೀಡುತ್ತಿದ್ದು, ಸದ್ಯ ನೋವಿನಿಂದ ಚೇತರಿಕೆ ಕಾಣದೆ ಇದ್ದಲ್ಲಿ ಶಸ್ತ್ರಚಿಕಿತ್ಸೆ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ವರದಿ ಸಲ್ಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular