HomeInternationalಭರ್ಜರಿ ಜಯಗಳಿಸಿದ ಡೊನಾಲ್ಡ್ ಟ್ರಂಪ್ ಗೆ ಅಮೆರಿಕ ಅಧ್ಯಕ್ಷ ಜೋ ಬಿಡೆನ್, ಉಪಾಧ್ಯಕ್ಷೆ ಕಮಲಾ ಹ್ಯಾರಿಸ್...

ಭರ್ಜರಿ ಜಯಗಳಿಸಿದ ಡೊನಾಲ್ಡ್ ಟ್ರಂಪ್ ಗೆ ಅಮೆರಿಕ ಅಧ್ಯಕ್ಷ ಜೋ ಬಿಡೆನ್, ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅಭಿನಂದನೆ: ಶ್ವೇತಭವನಕ್ಕೆ ಆಹ್ವಾನ

ಯುಎಸ್ ಅಧ್ಯಕ್ಷ ಜೋ ಬಿಡನ್ ಅವರು ಮುಂದಿನ ಅಧ್ಯಕ್ಷರಾಗಿ ಆಯ್ಕೆಯಾದ ಡೊನಾಲ್ಡ್ ಟ್ರಂಪ್ ಅವರಿಗೆ ದೂರವಾಣಿ ಕರೆ ಮಾಡಿ ಅವರ ಗೆಲುವಿಗಾಗಿ ಅವರನ್ನು ಅಭಿನಂದಿಸಿದರು ಎಂದು ಶ್ವೇತಭವನ ತಿಳಿಸಿದೆ.

ಬಿಡೆನ್ ಅವರು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರೊಂದಿಗೆ ಟ್ರಂಪ್ ಜೊತೆಗೆ ದೂರವಾಣಿಯಲ್ಲಿ ಮಾತನಾಡಿ ಅವರ ಐತಿಹಾಸಿಕ ಗೆಲುವಿಗಾಗಿ ಅಭಿನಂದಿಸಿದ್ದಾರೆ.

ಬಿಡನ್ ಅವರು ಅಧ್ಯಕ್ಷರಾಗಿ ಆಯ್ಕೆಯಾದ ಟ್ರಂಪ್ ಅವರನ್ನು ಶ್ವೇತಭವನದಲ್ಲಿ ಭೇಟಿಯಾಗಲು ಆಹ್ವಾನಿಸಿದ್ದಾರೆ. ನಾಳೆ ಅಧ್ಯಕ್ಷ ಬಿಡೆನ್ ಅವರು ಚುನಾವಣಾ ಫಲಿತಾಂಶಗಳು ಮತ್ತು ಪರಿವರ್ತನೆಯ ಬಗ್ಗೆ ಚರ್ಚಿಸಲು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಯುಎಸ್ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಕೂಡ ಟ್ರಂಪ್ ಅವರ ಗೆಲುವಿಗೆ ಅಭಿನಂದಿಸಿದ್ದಾರೆ ಎಂದು ಶ್ವೇತಭವನ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular